ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜಿನ್ ನ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಪುತ್ತೂರು ಮಂಗಳೂರು ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವು ಇದೇ ಬರುವ ಫೆಬ್ರವರಿ 25 ರಂದು ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ದರ್ಬೆ ವಿನಾಯಕ ನಗರ ಶ್ರೀ ಸಚ್ಚಿದಾನಂದ ಸೇವಾ ಸದನದಲ್ಲಿ ನಡೆಯಲಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಅಧ್ಯಕ್ಷೆ ಮಲ್ಲಿಕಾ ಜೆ ರೈ, ಕಾರ್ಯದರ್ಶಿ ರೋಹಿಣಿ ಆಚಾರ್ಯ, ಕೋಶಾಧಿಕಾರಿ ಸುಮಂಗಲ ಶಣೈ, ನಿರ್ದೇಶಕರು ಚಂದ್ರಕಾಂತ್ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಮನೋಹರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


