ಕುಮಟಾ: ಜನಪದ ಕೋಗಿಲೆ ಎಂಬ ಖ್ಯಾತಿ ಪಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ನಾಡೋಜಾ ಸುಕ್ರಿ ಬೊಮ್ಮಗೌಡ (91) ವಯೋ ಸಹಜ ಕಾಯಿಲೆಯಿಂದಾಗಿ ಇಂದು (ಫೆ.13) ಸ್ವಗೃಹದಲ್ಲಿ ನಿಧನರಾದರು.
ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಹುಟ್ಟಿದ ಇವರು ವಿದ್ಯಾಭ್ಯಾಸ ಮಾಡದಿದ್ದರೂ ಹಾಲಕ್ಕಿ ಜನಾಂಗದ ಜನಪದ ಹಾಡುಗಳನ್ನು ಹಾಡುವ ಮೂಲಕ ಹಳ್ಳಿ ಸೊಗಡನ್ನು ದಿಲ್ಲಿಯ ವರೆಗೆ ಕೊಂಡೊಯ್ದ ಕೀರ್ತಿ ಅವರದ್ದು. ಮದ್ಯ ಮುಕ್ತ ಗ್ರಾಮ ಮಾಡುವ ಹೋರಾಟದಲ್ಲಿ ಭಾಗಿಯಾದ ಇವರು ತಮ್ಮ ಊರನ್ನು ಮದ್ಯ ಮುಕ್ತ ಗ್ರಾಮವನ್ನಾಗಿಸಿದರು.
2017 ರಲ್ಲಿ ಇವರ ಜನಪದ ಹಾಡಿನ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ. ರಾಜ್ಯ ರಾಷ್ಟ್ರದ ಹಲವು ಪ್ರಶಸ್ತಿ ಪಡೆದಿದ್ದ ಇವರು ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಹಾಸಿಗೆ ಹಿಡಿದಿದ್ದರೂ ತೀವ್ರ ಉಸಿರಾಟ ಸಮಸ್ಯೆ ಹೊಂದಿದ್ದ ಇವರು ಕೆಲವು ದಿನದ ಹಿಂದೆ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಮರಳಿ ಬಂದಿದ್ದರು. ಆದರೆ ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದರು. ಇಬ್ಬರು ಮ್ಮೊಕ್ಕಳು, ಒಬ್ಬ ಸೊಸೆಯನ್ನು ಅಗಲಿದ್ದಾರೆ. ಇಂದು ಬಡಿಗೇರಿಯಲ್ಲಿ ಇವರ ಅಂತ್ಯ ಸಂಸ್ಕಾರ ನೆರವೇರಲಿದೆ.
ಅವರು ಕಲೆಗಳಿಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾ೦ಪ್ರದಾಯಿಕ ಬುಡಕಟ್ಟು ಸ೦ಗೀತವನ್ನು ಸ೦ರಕ್ಷಿಸುವಲ್ಲಿ ಮಾಡಿದ ಕೆಲಸಕ್ಕಾಗಿ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮಶ್ರೀ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಸುಕ್ರಿ ಬೊಮ್ಮಗೌಡರು ಬಾಲ್ಕದಲ್ಲಿಯೇ ತಮ್ಮ ತಾಯಿಯಿಂದ ಹಾಡಲು ಕಲಿಸಿತರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾ೦ಪ್ರದಾಯಿಕ ಸಂಗೀತ ಮತ್ತು ಹಾಡುಗಳನ್ನು ಸ೦ರಕ್ಷಿಸಲು ಶ್ರಮಿಸಿದರು. 1988ರಲ್ಲಿ ಅವರ ಕೆಲಸಗಳನ್ನು ರಾಜ್ಯ ಸರ್ಕಾರ ಗುರುತಿಸಿತು. ಕಲೆ ಮತ್ತು ಸಂಗೀತಕ್ಕೆ ನೀಡಿದ ಕೊಡುಗೆಗಳಿಗಾಗಿ ನಾಡೋಜ ಪ್ರಶಸ್ತಿ ಮತ್ತು ಜಾನಪದ ಶ್ರೀ ಪ್ರಶಸ್ತಿ ಸೇರಿದ೦ತೆ ಹಲವಾರು ರಾಜ್ಯ ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡದಿದ್ದಾರೆ.
2017ರಲ್ಲಿ, ಸಂಗೀತಕ್ಕೆ ನೀಡಿದ ಕೊಡುಗೆಗಳಿಗಾಗಿ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದು ರಾಷ್ಟ್ರೀಯ ಮನ್ನಣೆ ಗಳಿಸಿದರು.
ಅವರಿಗೆ ಲಭಿಸಿರುವ ಪ್ರಶಸ್ತಿಗಳು: ಕರ್ನಾಟಕ ಸರಕಾರದ ಪ್ರಶಸ್ತಿ (1988), ಜನಪದ ಶ್ರೀ ಪ್ರಶಸ್ತಿ (ಕರ್ನಾಟಕ ಸರಕಾರ-1999), ನಾಡೋಜ ಪ್ರಶಸ್ತಿ (ಕನ್ನಡ ವಿಶ್ವವಿದ್ಯಾನಿಲಯ-2006), ಆಳ್ವಾಸ್ ನುಡಿಸಿರಿ ಪ್ರಶಸ್ತಿ (ಆಳ್ವಾಸ್ ಶಿಕ್ಷಣ ಸ೦ಸ್ಥೆ-2009), ಚು೦ಚಶ್ರೀ ಪ್ರಶಸ್ತಿ (ಆದಿಚು೦ಚನಗಿರಿ ಮಠ- 2017), ಪದ್ಮಶ್ರೀ ಪ್ರಶಸ್ತಿ (2017).
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ