ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್, ಸ್ಪೀಕರ್ ಖಾದರ್ ಉಪಸ್ಥಿತಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಲೋಗೋ ಅನಾವರಣ ಫೆ. 19 ರಂದು ಬೆಳಿಗ್ಗೆ 11 ಗಂಟೆಗೆ ಓಷಿಯನ್ ಪರ್ಲ್ ಹೋಟೆಲ್ ನಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸುವರ್ಣ ಸಂಭ್ರಮ ಲೋಗೋ ಅನಾವರಣ ಮಾಡಲಿದ್ದಾರೆ. ಕರ್ನಾಟಕ ವಿಧಾನಸಭೆ ಸಭಾಪತಿ ಯು ಟಿ ಖಾದರ್ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಶಾಸಕ ಡಾ. ಮಂಜುನಾಥ್ ಭಂಡಾರಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಛೇರ್ಮನ್ ಸಿಎ ಶಾಂತರಾಮ ಶೆಟ್ಟಿ, ಎಂ.ಆರ್.ಪಿ.ಎಲ್ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ರಘುರಾಮ್, ಆನಂದ್ ಶೆಟ್ಟಿ, ರವೀಂದ್ರ ಶೆಟ್ಟಿ, ಹರ್ಷ, ಜಗನ್ನಾಥ ಶೆಟ್ಟಿ ಬಾಳ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ನಿಕಟ ಪೂರ್ವ ಅಧ್ಯಕ್ಷ ಅನ್ನು ಮಂಗಳೂರು ಗೌರವ ಉಪಸ್ಥಿತರಿಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ