ಶ್ರೀ ನಂದನೇಶ್ವರ ದೇವಸ್ಥಾನದ ತೀರ್ಥಕೆರೆಯ ಉದ್ಘಾಟನೆ

Upayuktha
0 minute read
0

ಮಂಗಳೂರು: ಶಾಸಕ ಡಾ. ವೈ ಭರತ್ ಶೆಟ್ಟಿಯವರ ವಿಶೇಷ ಪ್ರಯತ್ನದೊಂದಿಗೆ ಸುಮಾರು ಒಂದು ಕೋಟಿ ರೂ ವೆಚ್ಚದಲ್ಲಿ ಪುನರ್ ನವೀಕರಣಗೊಂಡ ಪಣಂಬೂರು ಶ್ರೀ ನಂದನೇಶ್ವರ ದೇವಸ್ಥಾನದ ತೀರ್ಥಕೆರೆಯ ಉದ್ಘಾಟನೆ ನೆರವೇರಿತು. ಕಾರ್ಯಕ್ರಮದಲ್ಲಿ ಶಾಸಕರು ಭಾಗವಹಿಸಿ ಶುಭ ಹಾರೈಕೆಗಳೊಂದಿಗೆ ಶ್ರೀ ದೇವರ ಅನುಗ್ರಹ ಪ್ರಸಾದ ಸ್ವೀಕರಿಸಿದರು.


ಈ ಸಂದರ್ಭ ಉಡುಪು ವೇದಮೂರ್ತಿ ನರಸಿಂಹ ತಂತ್ರಿಗಳು, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ, ಕಾರ್ಪೊರೇಟರ್ ಸುನಿತಾ, ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು, ದೇವಸ್ಥಾನದ ಆಡಳಿತ ಅಧಿಕಾರಿಗಳು ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top