ಎಸ್‌ಡಿಎಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ Lab In Cab ಕಾರ್ಯಕ್ರಮ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು(ಸ್ವಾಯತ್ತ), ಉಜಿರೆಯ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಸರ್ಕಾರಿ ಪ್ರೌಢಶಾಲೆ ಪೆರ್ಲಬೈಪಾಡಿಯಲ್ಲಿ Lab In Cab ಕಾರ್ಯಕ್ರಮವನ್ನು 20/02/2025 ರಂದು ಹಮ್ಮಿಕೊಳ್ಳಲಾಯಿತು. ಶಾಲೆಯ 9ನೇ ತರಗತಿಯಲ್ಲಿ ಕಲಿಯುತ್ತಿರುವ 49 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಫಲಾನುಭವಿಗಳು. ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಏಕದಳ ಹಾಗೂ ದ್ವಿದಳ ಸಸ್ಯಗಳ ಕಾಂಡದ ಒಳ ವಿನ್ಯಾಸ ಹಾಗೂ Transpiration pull concept ಅನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಅವರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಭಿಲಾಷ್ ಕೆ. ಎಸ್. ಹಾಗೂ ಭವ್ಯ ಡಿ. ನಾಯಕ್ ಕಾರ್ಯಕ್ರಮವನ್ನು ಆಯೋಜಿಸಿದರು. ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಆನ್ಸನ್ ಬ್ರಿನೋದ್ ಫರ್ನಾಂಡಿಸ್, ಆಶುರಾ ಫೈಝಾ ಹಾಗೂ ಮೇಘಶ್ರೀ ವಿ. ಎಸ್. ಸಹಕರಿಸಿದರು.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top