ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದರು

Upayuktha
0

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಶುಕ್ರವಾರ ಮಂಗಳೂರಿನ ತಮ್ಮ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.


ಇಂದಿನ ಸಾರ್ವಜನಿಕರ ಭೇಟಿ ವೇಳೆ ಕಚೇರಿಗೆ ಬಂದಿದ್ದ ನಾಗರಿಕರ ಅಹವಾಲುಗಳನ್ನು ಆಲಿಸಿದ ಸಂಸದರು, ಸಮಸ್ಯೆಗೆ ಪರಿಹಾರದ ಭರವಸೆ ನೀಡಿದ್ದಾರೆ. ಸಂಸದ ಕ್ಯಾ. ಚೌಟ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ ತಾಲೂಕುಗಳಿಗೆ ಭೇಟಿ ನೀಡಿ ಅಲ್ಲಿಯೂ ಸ್ಥಳೀಯವಾಗಿ ಸಾರ್ವಜನಿಕರ ಅಹವಾಲು ಆಲಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದಾರೆ.


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top