ಮೋದಿ ಸರ್ಕಾರದ ಸರ್ವಸ್ಪರ್ಶಿ ಬಜೆಟ್: ಶಾಸಕ ಕಾಮತ್

Upayuktha
0

 



ಮಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಮಂಡಿಸಿದ ದಾಖಲೆಯ ಎಂಟನೇ ಬಾರಿಯ 2025-26 ನೇ ಸಾಲಿನ ವಿಕಸಿತ ಬಜೆಟ್‌ ನವ ಭಾರತಕ್ಕೆ ಹೊಸ ಶಕ್ತಿಯನ್ನು ತುಂಬುವುದರ ಜೊತೆಗೆ ರಾಷ್ಟ್ರವು ಜಾಗತಿಕ ಮಟ್ಟದಲ್ಲಿ ಸದೃಢವಾಗಿ ಬೆಳೆಯುತ್ತಿರುವುದರ ಸಂಕೇತವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು.


ಬಜೆಟ್ ನಲ್ಲಿ ತೆರಿಗೆದಾರರಿಗೆ 12 ಲಕ್ಷದವರೆಗಿನ ಆದಾಯ ತೆರಿಗೆ ರದ್ದುಪಡಿಸಿರುವುದು ಅತ್ಯಂತ ದೊಡ್ಡ ನಿರ್ಧಾರವಾಗಿದ್ದು, ಕ್ಯಾನ್ಸರ್‌ ಔಷಧ, ಎಲೆಕ್ಟ್ರಿಕ್‌ ವಾಹನಗಳು, ಮೊಬೈಲ್‌ ಫೋನ್, ಎಲ್‌ಇಡಿ ಟಿವಿ, ಚರ್ಮದ ಉತ್ಪನ್ನಗಳು, ಸ್ವದೇಶಿ ಬಟ್ಟೆಗಳು ಹೀಗೆ ಹತ್ತು ಹಲವು ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದ್ದು ಬಡ ಹಾಗೂ ಮಧ್ಯಮ ವರ್ಗದ ಹರ್ಷಕ್ಕೆ ಕಾರಣವಾಗಿದೆ. 


ಸಣ್ಣ, ಮಧ್ಯಮ ಉದ್ದಿಮೆದಾರರಿಗೆ 20 ಕೋಟಿವರೆಗೆ ಸಾಲ, ಎಸ್ಸಿ ಎಸ್ಟಿ ಮಹಿಳಾ ಉದ್ದಿಮೆದಾರರಿಗೆ 2 ಕೋಟಿವರೆಗೆ ವಿಶೇಷ ಸಾಲ, ಬೀದಿಬದಿ ವ್ಯಾಪಾರಿಗಳಿಗೆ ಸಾಲ, ಕೃಷಿಕರಿಗೆ-ಮಹಿಳೆಯರಿಗೆ-ಯುವಕರಿಗೆ- ಹಿರಿಯರಿಗೆ ವಿಶೇಷ  ಆದ್ಯತೆ ಹೀಗೆ ಪ್ರತಿಯೊಂದು ಕ್ಷೇತ್ರಕ್ಕೂ ವಿಶೇಷವಾಗಿ ಗಮನ ಹರಿಸಲಾಗಿರುವ ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದರು.


ಎಂದಿನಂತೆ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಹತಾಶೆಯಲ್ಲಿ ಅನಗತ್ಯ ಟೀಕೆ ಮಾಡುತ್ತಿದ್ದರೂ ದೇಶದ ಜನತೆ ಅದಕ್ಕೆಲ್ಲ ಹೆಚ್ಚಿನ ಪ್ರಾಶಸ್ತ್ಯ ನೀಡದೇ ಈ ಬಾರಿಯ ಕೇಂದ್ರದ ಬಜೆಟ್ ನಿಂದ ಸಂತಸಗೊಂಡಿರುವುದು ಗಮನಾರ್ಹ ಸಂಗತಿ ಎಂದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top