ಮಂಗಳೂರು: ಇಂದು ಡಾ. ಎಂ.ಎನ್‌ಆರ್ 76ನೇ ಜನ್ಮದಿನದ ಸಂಭ್ರಮ

Upayuktha
0


ಮಂಗಳೂರು: ಸಹಕಾರಿ ಕ್ಷೇತ್ರದ ಅಗ್ರಗಣ್ಯರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿರುವ 'ಸಹಕಾರ ರತ್ನ'  ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ದದ ಪ್ರಯುಕ್ತ ಇಂದು ಅವರ ಅಭಿಮಾನಿಗಳೆಲ್ಲರೂ ಸೇರಿ ಸಂಭ್ರಮಾಚರಣೆ ನಡೆಸಲಿದ್ದಾರೆ.


ಈ ಬೆಳಗ್ಗೆ 10:30ಕ್ಕೆ  ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ. ಎಂಎನ್‌ಆರ್ ಅವರ ಅಭಿನಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ.


ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯಯೋಜನೆಯನ್ನು ಆಯೋಜಿಸಿ, ನಮಗೆಲ್ಲರಿಗೂ ಮಾರ್ಗದರ್ಶಕರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮವು ಈ ಸಂದರ್ಭದಲ್ಲಿ ಆಯೋಜನೆಯಾಗಿದೆ. ಸಹಕಾರ ಕ್ಷೇತ್ರವು ಸರ್ವಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲಾ ವರ್ಗದ ಫಲಾನುಭವಿಗಳನ್ನು ಗುರುತಿಸಿ, ಸವಲತ್ತುಗಳನ್ನು ಈ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ಅಭಿವಂದನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು.


ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು. ಟಿ. ಖಾದರ್ ಫರೀದ್ ಅವರು ಉದ್ಘಾಟಿಸಲಿದ್ದಾರೆ.


ಸಮಸ್ತ ಸಹಕಾರಿಗಳ ಪರವಾಗಿ ಈ ಕಾರ್ಯಕ್ರಮದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾ‌ರ್ ಅವರು ಅಭಿವಂದನೆ ಸ್ವೀಕರಿಸಲಿದ್ದು, ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎನ್. ವಿನಯ್ ಹೆಗ್ಡೆ ಅವರು ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿವಂದಿಸಲಿರುವರು. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಇವರು ಅಭಿವಂದನಾ ಭಾಷಣ ಮಾಡಲಿರುವರು.


76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆಯನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ನೆರವೇರಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top