ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದಲ್ಲಿ ಆಸಕ್ತಿಯನ್ನುಂಟು ಮಾಡುವ ಮೂಲ ಉದ್ದೇಶದೊ0ದಿಗೆ ನಾವು ಮನೆಯಲ್ಲಿ ದಿನನಿತ್ಯ ಉಪಯೋಗಿಸುವ ವಸ್ತುಗಳನ್ನು ತಯಾರಿಸುವ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಾಗಾರದಲ್ಲಿ ನಾವು ದೈನ0ದಿನ ಜೀವನದಲ್ಲಿ ಉಪಯೋಗಿಸುವ ವಸ್ತುಗಳಾದ ಟೂತ್ ಪೌಡರ್, ಸೋಪು, ಲಿಕ್ವಿಡ್ ಸೋಪು, ಡಿಟರ್ಜೆಂಟ್ ಪೌಡsರ್, ನೋವು ನಿವಾರಕ ಕ್ರೀಂಗಳು, ಪಿನೈಲ್, ಸುಗ0ಧ ದ್ರವ್ಯಗಳು ಇತ್ಯಾದಿ ವಸ್ತುಗಳನ್ನು ತಯಾರಿಸಲು ಬೇಕಾಗುವ ಕಚ್ಛಾವಸ್ತುಗಳು ಮತ್ತು ಅದಕ್ಕೆ ತಗಲುವ ವೆಚ್ಚ ಇದರ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ರಸಾಯನ ಶಾಸ್ತ್ರ ಪ್ರಯೋಗಾಲಯದಲ್ಲಿ ಇವುಗಳನ್ನು ತಯಾರಿಸಿ ತೋರಿಸಲಾಯಿತು. ಪ್ರೌಢಶಾಲೆಯ ವಿದ್ಯಾರ್ಥಿಗಳಿಂದಲೇ ಕೆಲವು ವಸ್ತುಗಳನ್ನು ತಯಾರಿಸಲು ಉತ್ತೇಜಿಸಲಾಯಿತು.
ನಮ್ಮ ಕಾಲೇಜಿನ ತೃತೀಯ ವಿಜ್ಞಾನ ಪದವಿಯ ರಸಾಯನ ಶಾಸ್ತ್ರದ ವಿದ್ಯಾರ್ಥಿಗಳು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಕುಮಾರಿ ಕೆ. ಪಿ. ಇವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಗಾರದ ಉದ್ದೇಶ ಹಾಗು ಪ್ರಾಮುಖೈತೆಯನ್ನು ತೃತೀಯ ವಿಜ್ಞಾನ ಪದವಿಯ ರಸಾಯನ ಶಾಸ್ತ್ರದ ವಿದ್ಯಾರ್ಥಿನಿ ರಜನಿ ತಿಳಿಸಿದರು. ಉಪನ್ಯಾಸಕಿ ದಿವ್ಯ ಸಂಯೋಜಿಸಿದ ಈ ಕಾರ್ಯಕ್ರಮದಲ್ಲಿ ಉಪನ್ಯಾಸಕಿಯರಾದ ಗಾನವಿ ಮತ್ತು ಸಂಗೀತ ಬಿ. ಸಹಕರಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ