ರಾಷ್ಟ್ರಿಯ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್: ಕಂಚಿನ ಪದಕ

Upayuktha
0



ಮೂಡುಬಿದಿರೆ: ಉತ್ತರಖಂಡದ ಡೆಹ್ರಾಡೂನ್‌ನಲ್ಲಿ ಜರುಗಿದ ರಾಷ್ಟ್ರಿಯ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಉಷಾ ಎಸ್ ಆರ್ ಕಂಚಿನ ಪದಕವನ್ನು ಪಡೆದಿದ್ದಾರೆ.  


ಇವರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ.87ಕೆಜಿ ದೇಹ ತೂಕ ವಿಭಾಗದಲ್ಲಿ ಸ್ಪರ್ಧಿಸಿರುವ ಇವರು ಒಟ್ಟು 197ಕೆಜಿ ಭಾರ ಎತ್ತಿ ಕಂಚಿನ ಪದಕಕ್ಕೆ ಪಾತ್ರರಾಗಿದ್ದಾರೆ.


76ಕೆಜಿ ದೇಹತೂಕ ವಿಭಾಗದಲ್ಲಿ ಸ್ಪರ್ದಿಸಿದ್ದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ತನುಷ ನಾಲ್ಕನೇ ಸ್ಥಾನ ಪಡೆದಿದ್ದಾರೆ. ರಾಷ್ಟ್ರಿಯ ಕ್ರೀಡಾಕೂಟದ  ವೇಯ್ಟ್ಲಿಫ್ಟಿಂಗ್ ವಿಭಾಗದಲ್ಲಿ ಇವರು ಇರ್ವರೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದವರು. 

ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕ್ರೀಡಾಪಟುಗಳ ಸಾಧನೆಯನ್ನು ಅಭಿನಂದಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top