ಬೆಳ್ತಂಗಡಿ ಮತ್ತು ಪುತ್ತೂರು ಮುಳಿಯದಲ್ಲಿGem Stone ಉತ್ಸವದ ಸಂಭ್ರಮ

Upayuktha
0


ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಫೆ.15 ರಿಂದ 28 ರವರೆಗೆ Gem stone ಉತ್ಸವ ಪ್ರಾರಂಭಗೊಂಡಿದೆ. ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯದಲ್ಲಿ 13 ದಿನಗಳ ಕಾಲ gem Stone ಉತ್ಸವದಲ್ಲಿ ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ಮಾಣಿಕ್ಯ, ಮುತ್ತು, ಹವಳ, ಪಚ್ಚೆ, ಪುಷ್ಯರಾಗ, ವಜ್ರ, ನೀಲ, ಗೋಮೇಧಿಕ ಮತ್ತು ವೈಢೂರ್ಯಗಳಾದ ನವರತ್ನ ಆಭರಣಗಳ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ.


ನವರತ್ನ ಆಭರಣಗಳದ ಉಂಗುರ, ನೆಕ್ಲೇಸ್, ಬ್ರೇಸ್ಲೆಟ್ಸ್, ಪದಕ, ಬಳೆ ಮತ್ತು ಸರಗಳು ಅಧಿಕ ವಿನ್ಯಾಸದ ನವರತ್ನ ಆಭರಣಗಳ ಅಮೋಘ ಸಂಗ್ರಹವಿದೆ. ಮಹಿಳೆಯರ ಮನಸೂರೆಗೊಳಿಸುವ ರೀತಿಯಲ್ಲಿ ಚಿನ್ನಾಭರಣದ ಸಂಗ್ರಹ ಹೊಂದಿರುವ ಮುಳಿಯದಲ್ಲಿ ಗ್ರಾಹಕರು ಉತ್ಸವದ ಮೂಲಕ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಹಾಗೂ ಮುಳಿಯ ಮಳಿಗೆಯಲ್ಲಿ Gem Stone ಉತ್ಸವದ ಅನಾವರಣ ಮಾಡಲಾಯಿತು.


ಮುಖ್ಯ ಅತಿಥಿಗಳಾಗಿ ಎಕ್ಸಲ್ ಕಾಲೇಜ್ ಗುರುವಾಯನಕೆರೆಯ ಉಪನ್ಯಾಸಕರುಗಳಾದ ಶ್ರೀಮತಿ ಸಹನಾ ಜೈನ್, ಕುಮಾರಿ ನಿಶಾ ಪೂಜಾರಿ, ಶ್ರೀಮತಿ ಶ್ರುತಿ ಶೆಟ್ಟಿ ಅನಾವರಣಗೊಳಿಸಿದರು. ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್ ಹಾಗೂ ಉಪಶಾಖ ಪ್ರಬಂಧಕರಾದ ದಿನೇಶ್ ಮತ್ತು ಮುಳಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top