ಬೆಳ್ತಂಗಡಿ: ಮುಂಡಾಜೆ ಪದವಿಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ 2024-25ನೇ ಶೈಕ್ಷಣಿಕ ವರ್ಷದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ದ್ವಿತೀಯ ಪಿಯುಸಿ ಸ್ವಯಂ ಸೇವಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಮುಖ್ಯ ಅತಿಥಿಗಳಾಗಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ಇವರು, 'ವಿದ್ಯಾರ್ಥಿ ಜೀವನದಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸಬೇಕು, ಅವಕಾಶಗಳ ಸದ್ಬಳಕೆಯಿಂದ ವಿಕಸಿತ ಭಾರತದ ನಿರ್ಮಾಣ ಸಾಧ್ಯ' ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ, ಅವರು ಮಾತನಾಡಿ, ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಮೂಲಕ ಕೈಗೊಳ್ಳಬಹುದಾದ ಸಮಾಜಮುಖಿ ಕೆಲಸಗಳ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ, ರೇಂಜರ್ ಲೀಡರ್ ವಸಂತಿ ನಾಯ್ಕ್ ಉಪಸ್ಥಿತರಿದ್ದರು. ಪ್ರಥಮ ಪಿಯುಸಿಯ ರೇಂಜರ್ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿ, ರೇಂಜರ್ ಹೊಂಗಿರಣ ಸ್ವಾಗತಿಸಿ, ರೇಂಜರ್ ಜಲಜಾಕ್ಷಿ ಧನ್ಯವಾದಗೈದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ