ಮಹಾ ಕುಂಭಮೇಳದಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಪುಣ್ಯಸ್ನಾನ

Upayuktha
0



ಪ್ರಯಾಗ್‌ರಾಜ್‌: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ.


144 ವರ್ಷಗಳಿಗೊಮ್ಮೆ ನಡೆಯುವ ಈ ಐತಿಹಾಸಿಕ ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸಂಸದರು, ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ವಿಶೇಷ ಪೂಜೆ ನೆರವೇರಿಸಿ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.


“ಪ್ರಯಾಗ್‌ರಾಜ್‌ನ ಈ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ನನಗೆ ಸೌಭಾಗ್ಯ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ. ತ್ರಿವೇಣಿ ಸಂಗಮದಲ್ಲಿ ಮಿಂದದ್ದು ಮರೆಯಲಾಗದ ಅದ್ಬುತ ಆಧ್ಯಾತ್ಮಿಕ ಅನುಭವ. ಈ ಪುಣ್ಯಸ್ನಾನದಿಂದ ನವ ಚೈತನ್ಯ ಮೂಡಿಸಿದೆ. 


ಉತ್ತರ ಪ್ರದೇಶದಲ್ಲಿ ವಿಶ್ವದ ಅತಿದೊಡ್ಡ ಧಾರ್ಮಿಕ-ಆಧ್ಯಾತ್ಮಿಕ-ಸಾಂಸ್ಕೃತಿಕ ಸಂಗಮ ಮಹಾ ಕುಂಭಮೇಳವನ್ನು ಅಚ್ಚುಕಟ್ಟಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಇಲ್ಲಿಗೆ ಬರುತ್ತಿರುವ ಕೋಟ್ಯಂತರ ಭಕ್ತಾದಿಗಳಿಗೆ ಅದ್ಭುತ ವ್ಯವಸ್ಥೆ ಕಲ್ಪಿಸಿದ್ದಾರೆ” ಎಂದು ಕ್ಯಾ. ಚೌಟ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top