ಮಾ.1ರಿಂದ 9ರ ವರೆಗೆ ನಡೆಯಲಿದೆ ಕಾವೂರು ಶ್ರೀ ಮಹಾಲಿಂಗೇಶ್ವರನಿಗೆ ಬ್ರಹ್ಮಕಲಶೋತ್ಸವ
ಮಂಗಳೂರು: ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾರ್ಚ್ 1ರಿಂದ 9ರ ತನಕ ಬ್ರಹ್ಮಕಲಶೋತ್ಸವ ಜರುಗಲಿದ್ದು, ಇದರ ಅಂಗವಾಗಿ ಚಪ್ಪರ ಮುಹೂರ್ತ ಭಾನುವಾರ (ಫೆ.16) ನಡೆಯಿತು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಹಾಗೂ ಮೊಕ್ತಸರ ವೇ.ಮೂ. ಕೆ. ವಾಸುದೇವ ಆಸ್ರಣ್ಣ ಚಪ್ಪರ ಮುಹೂರ್ತ ನೆರವೇರಿಸಿದರು.
ಕಾವೂರು ದೇವಸ್ಥಾನದ ಪ್ರಧಾನ ಅರ್ಚಕ ಕೆ.ಶ್ರೀನಿವಾಸ ಭಟ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಆಶಿಕ್ ಬಳ್ಳಾಲ್ ಕೊಳೂರುಬೀಡು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಮೋಹನ ಪ್ರಭು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅವಿನಾಶ್ ನಾಯ್ ಪಂಜಿಮುಗೇರು ಗುತ್ತು, ಪ್ರಧಾನ ಕಾರ್ಯದರ್ಶಿ ಸುಧಾಕರ ಆಳ್ವ ಕೋಶಾಧಿಕಾರಿ ದೀಪಕ್ ಪೂಜಾರಿ, ರಾಮಣ್ಣ ಶೆಟ್ಟಿ ಮುಗಿಪು, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಸುಧಾಕರ ಶೆಟ್ಟಿ ಮುಗೋಡಿ, ವ್ಯವಸ್ಥಾಪನಾ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ