ಪುತ್ತೂರು: ರಾಷ್ಟ್ರ ಎಂದರೇನು? ರಾಷ್ಟ್ರದಲ್ಲಿ ನಾವೇನು? ಮತ್ತು ನಮಗೆ ರಾಷ್ಟ್ರವೇನು? ಈ ಮೂರು ಸಂಗತಿಗಳನ್ನು ಅರ್ಥ ಮಾಡಿಕೊಳ್ಳದ ವಿನಃ ವಿವೇಕಾನಂದರ ಚಿಂತನೆಗಳನ್ನು ಅರ್ಥ ಮಾಡಿಕೊಳುವುದು ಕಷ್ಟ. ವಿದ್ಯಾರ್ಥಿಗಳು ವಿವೇಕಾನಂದರ ಚಿಂತನೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಉತ್ತಮ ಭಾರತದ ನಿರ್ಮಾಣಕ್ಕೆ ಕೈ ಜೋಡಿಸಬೇಕು. ರಾಷ್ಟ್ರಕ್ಕಾಗಿ ಜೀವನವನ್ನು ಮುಡಿಪಾಗಿರಿಸಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಜಿಲ್ಲಾ ಸಹಕಾರ್ಯದರ್ಶಿ ಲತೀಶ್ ಬಾಕ್ರಬೈಲು ಹೇಳಿದರು.
ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯ, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ನಡೆದ “ರಾಷ್ಟ್ರ ವಿವೇಕ: ಸ್ವಾಮಿ ವಿವೇಕಾನಂದ” ವಿಷಯಧಾರಿತ "ವಿವೇಕ ಸ್ಮೃತಿ” ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಮಾತನಾಡಿ ವಿವೇಕ ಸ್ಮೃತಿ ಕಾರ್ಯಕ್ರಮದ ಉದ್ದೇಶ ನಮ್ಮ ಆಚರಣೆ ನಮ್ಮ ಚಿಂತನೆಗಳನ್ನು ಮುಂದಿನ ಪೀಳಿಗೆಗಳಿಗೆ ತಿಳಿಸುವುದಾಗಿದೆ. ಸ್ವಾಮಿ ವಿವೇಕಾನಂದರ ಜೀವನ ಮೌಲ್ಯಗಳನ್ನು ಓದಿ ತಿಳಿಯುದಕ್ಕಿಂತ, ಅವರ ಬಗ್ಗೆ ಅರಿತವರ ಮಾತುಗಳಲ್ಲಿ ತಿಳಿದುಕೊಳ್ಳುವುದು ಸರಳ ಎಂದರು.
ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಪ್ರೊ ಶಿವಪ್ರಸಾದ್ ಕೆ ಎಸ್, ಭಾರತೀಯ ಸಂಸ್ಕೃತಿ ಹಾಗೂ ಲಲಿತಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್, ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ.ವಿಜಯ ಸರಸ್ವತಿ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದ್ವಿತೀಯ ಎಂಕಾಂ ವಿದ್ಯಾರ್ಥಿ ರಜತ್ ಜೆ.ಪಿ. ಸ್ವಾಗತಿಸಿ, ಪ್ರಥಮ ಜೆಎಂಸಿ ವಿದ್ಯಾರ್ಥಿನಿ ಪಂಚಮಿ ಬಾಕಿಲಪದವು ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿ ನವೀನ್ ಕೃಷ್ಣ ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ