ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ (SCI) ಪುತ್ತೂರು ಲೀಜನ್ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವು ಮಂಗಳವಾರ (ಫೆ.25) ಶ್ರೀ ಸಚ್ಚಿದಾನಂದ ಸೇವಾ ಸದನ ವಿನಾಯಕ ನಗರ ದರ್ಬೆ, ಪುತ್ತೂರು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಲ್ಲಿಕಾ ಕುಕ್ಕಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾದ ಶಿಕ್ಷಣ ಸಂಪನ್ಮೂಲ ಕೇಂದ್ರ ಅಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಸರಸ್ವತಿ ಕಾರ್ಪೊರೇಟಿವ್ ಬ್ಯಾಂಕ್ ಮ್ಯಾನೇಜರ್ ದೇವಿಪ್ರಸಾದ್, ನೇತ್ರ ಚಿಕಿತ್ಸಾಧಿಕಾರಿ ಶ್ರೀಲತಾ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಎಸ್‌ಸಿಐ ಅಧ್ಯಕ್ಷೆ Snr ಮಲ್ಲಿಕಾ ಜೆ ರೈ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. Snr ಅನ್ನಪೂರ್ಣಿಮಾ ಆರ್ ರೈ,Snr ಚಂದ್ರ ಕಾಂತ್ ಕಾರ್ಯಕ್ರಮ ಸಂಯೋಜಿಸಿದರು.
ಎಸ್‌ಸಿಐ ಕಾರ್ಯದರ್ಶಿ Snr ರೋಹಿಣಿ ಆಚಾರ್ಯ ಎಲ್ಲರನ್ನೂ ಸ್ವಾಗತಿಸಿದರು. ಕೋಶಾಧಿಕಾರಿ Snr ಸುಮಂಗಲ ಶಣೈ ಕಾರ್ಯಕ್ರಮ ನಿರೂಪಿಸಿದರು. ಎಸ್‌ಸಿಐ ಎಲ್ಲಾ ಸದಸ್ಯರು ಭಾಗವಹಿಸಿದರು. ನೇತ್ರ ಚಿಕಿತ್ಸಾ ವಿಭಾಗದ PRO ಗಳು, ಸಿಬ್ಬಂದಿಗಳು ಭಾಗವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ