ಪುತ್ತೂರು: ಮೊದಲು ನಿಮ್ಮ ಸಾಮರ್ಥ್ಯವನ್ನು ಅರಿತುಕೊಳ್ಳಿ ನಂತರ ಮುಂದಿನ ಹೆಜ್ಜೆಯಿಡಿ. ಯಾವ ವಿಷಯದಲ್ಲಿ ನಿಪುಣರೋ ಅದು ನಿಮ್ಮ ಆಯ್ಕೆಯಾಗಿರಲಿ. ಕಲಿಕೆ ಎನ್ನುವುದು ಬಾಯಿಪಾಠ ಮಾಡುವುದಲ್ಲ ವಿಷಯವನ್ನು ಅರ್ಥ ಮಾಡಿಕೊಳ್ಳುವುದು. ಆದ್ದರಿಂದ ವಿಷಯವನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ ಎಂದು ವಿವೇಕಾನಂದ ಕಾಲೇಜಿನ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ರಾಜೇಶ್ವರಿ ಎಂ ಹೇಳಿದರು.
ವಿವೇಕಾನಂದರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯದ ಟ್ರೇನಿಂಗ್ ಆಂಡ್ ಪ್ಲೇಸ್‌ಮೆಂಟ್ ಸೆಲ್ ಮತ್ತು ಐಕ್ಯುಎಸಿ ಸಹಯೋಗದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ "ಪಾಥ್ ವೇ ಟು ಸಕ್ಸಸ್ " ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಇನ್ನೋರ್ವ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಎಂಸಿಎ ವಿಭಾಗದ ಪ್ರಾಧ್ಯಾಪಕಿ ಪ್ರೊ. ನೀಮ ಎಚ್, ಆಸಕ್ತಿ ಇದ್ದಾಗ ಮಾತ್ರವೇ ನಾವು ಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ. ಗುರಿಯನ್ನು ತಲುಪಲು ಹಲವಾರು ದಾರಿಗಳಿವೆ ಯಾವ ದಾರಿ ಸರಿಯೆಂದು ನಿರ್ಧರಿಸುವ ಸಾಮರ್ಥ್ಯ ನಮ್ಮಲ್ಲಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಸಿ, ರಸಾಯನಶಾಸ್ತ್ರ ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ಡಾ.ಸ್ಮಿತಾ ರೈ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ