ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಸರಕಾರಿ ಪ್ರೌಢಶಾಲೆ ಪೆರ್ಲಬೈಪಾಡಿಯಲ್ಲಿ ಔಷಧೀಯ ಸಸ್ಯಗಳ ಕುರಿತಾದ ಜಾಗೃತಿ ಕಾರ್ಯಕ್ರಮವನ್ನು 20/02/2025 ರಂದು ನಡೆಸಲಾಯಿತು. ಈ ಶಾಲೆಯ 8ನೇ ತರಗತಿಯ 24 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಕಂಡುಬರುವ ಕೆಲವು ಔಷಧೀಯ ಸಸ್ಯಗಳು ಹಾಗೂ ಅವುಗಳ ಪ್ರಧಾನ ಉಪಯೋಗಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಮೂಲಕ ಅವುಗಳ ಸಂರಕ್ಷಣೆ ಮಾಡಬೇಕೆಂಬ ಆಶಯದೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು. ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಅವರು ಉಪಸ್ಥಿತರಿದ್ದರು.
ಎಸ್.ಡಿ.ಎಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಭಿಲಾಷ್ ಕೆ. ಎಸ್. ಹಾಗೂ ಭವ್ಯ ಡಿ. ನಾಯಕ್ ಇವರು ಕಾರ್ಯಕ್ರಮಕ್ಕೆ ನೇತೃತ್ವ ನೀಡಿದ್ದರು. ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಪೂರ್ವಿಕ ಜಿ.ಕೆ ಹಾಗೂ ವೈದೇಹಿ ಕೆ ಸಹಕರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ