ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದ ಸ್ಪೀಕರ್ ಯು.ಟಿ ಖಾದರ್

Upayuktha
0


ಮಂಗಳೂರು: ಮಿನಿ ಲಾರಿಗೆ ಹಾಲು ಸಾಗಾಟದ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಗಾಯಗೊಂಡ ಘಟನೆ ಬುಧವಾರ ಪಡೀಲ್‌ನಲ್ಲಿ ಸಂಭವಿಸಿದೆ.


ಬಿ.ಸಿ. ರೋಡ್‌ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಟೆಂಪೋ ಡಿವೈಡರ್‌ ಮೇಲೇರಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಮಿನಿ ಲಾರಿಗೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಟೆಂಪೋ ಚಾಲಕನಿಗೆ ಗಾಯವಾಗಿದೆ. ಅಪಘಾತದಿಂದಾಗಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.


ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಪೀಕರ್‌ ಯು.ಟಿ. ಖಾದರ್‌ ಅವರು ರಕ್ಷಣ ಕಾರ್ಯ ಮತ್ತು ಸಂಚಾರ ನಿರ್ವಹಣೆಯಲ್ಲಿ ಸ್ವತಃ ಪಾಲ್ಗೊಂಡು ನೆರವಾದರು. ಗಾಯಾಳುವಿಗೆ ಸೂಕ್ತ ಚಿಕಿತ್ಸೆಗೂ ವ್ಯವಸ್ಥೆ ಮಾಡಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top