ಮಂಗಳೂರು: ಸೇಂಟ್ ಅಲೋಶಿಯಸ್ ಪರಿಗಣಿತ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಅಧ್ಯಯನ ವಿಭಾಗವು ನಗರದ ಸ್ವರ್ಣಪ್ರಾಣ ವೆಲ್‌ಬೀಯಿಂಗ್ ಇನ್‌ಸ್ಟಿಟ್ಯೂಟ್ ಸಹಯೋಗದಲ್ಲಿ 'ಮುಟ್ಟಿನ ನಿರ್ವಹಣೆಯಲ್ಲಿ ಸುಸ್ಥಿರ ಸಬಲೀಕರಣ' ಎಂಬ ಕಾರ್ಯಾಗಾರವನ್ನು ಡೊಂಗರಕೇರಿಯ ಕೆನರಾ ಹೈಸ್ಕೂಲಿನಲ್ಲಿ ವಿದ್ಯಾರ್ಥಿಗಳಿಗಾಗಿ ಇಂದು (ಫೆ.25) ಆಯೋಜಿಸಿತ್ತು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಿಲ್ಪಾ ಶಾಸ್ತ್ರಿ ಅವರು ಭಾಗವಹಿಸಿ, ವಿದ್ಯಾರ್ಥಿನಿಯರು ಮುಟ್ಟಿನ ನಿರ್ವಹಣೆಯಲ್ಲಿ ವಹಿಸಬೇಕಾದ ಕಾಳಜಿಗಳ ಬಗ್ಗೆ ಮಾಹಿತಿ ನೀಡಿದರು. ಪರಿಸರ ಸ್ನೇಹಿಯಾದ ಸ್ವಚ್ಛತಾ ವಿಧಾನಗಳು, ಸ್ಯಾನಿಟರಿ ಪ್ಯಾಡ್‌ಗಳ ಸರಿಯಾದ ನಿರ್ವಹಣೆ ಮತ್ತು ವಿಲೇವಾರಿ ಹಾಗೂ ಮುಟ್ಟಿನ ಕುರಿತು ಸಮಾಜದಲ್ಲಿ ಈಗಲೂ ಇರುವ ಮೈಲಿಗೆಯ ಭಾವನೆಯ ಕುರಿತು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ 6ನೆ ತರಗತಿಯಿಂದ 9ನೇ ತರಗತಿ ವರೆಗಿನ ಸುಮಾರು 90 ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಸೇಂಟ್ ಅಲೋಶಿಯಸ್ ಪರಿಗಣಿತ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳಾದ ತಪಸ್ವಿ ವಚ್ಚಾನಿ ಮತ್ತು ನೇಹಾ ಅವರು ವಿಭಾಗ ಮುಖ್ಯಸ್ಥರಾದ ಶ್ರೀಮತಿ ಭವ್ಯ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಆಯೋಜಿಸಿದರು.
ಎಂಎಜೆಎಂಸಿ ವಿದ್ಯಾರ್ಥಿನಿಯರಾದ ರೀಮಾ ಕಾರ್ಯಕ್ರಮ ನಿರೂಪಿಸಿದರು, ನೇಹಾ ಸ್ವಾಗತಿಸಿದರು, ತಪಸ್ವಿ ವಚ್ಚಾನಿ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ