ಸಮಾಜಕ್ಕೆ ನೆರವಾಗುವ ಕಾರ್ಯಕ್ರಮಗಳಿಗೆ ಬೆಂಬಲ: ಡಾ.ಎಂ.ಎನ್. ರಾಜೇಂದ್ರ ಕುಮಾರ್

Upayuktha
0

ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ “ಸುವರ್ಣ ಸಂಭ್ರಮ" ಲೋಗೋ ಅನಾವರಣ




ಮಂಗಳೂರು: ಸಮಾಜಕ್ಕೆ ನೆರವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಪತ್ರಕರ್ತರಿಗೆ ನನ್ನ ನಿರಂತರ ಬೆಂಬಲವಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಸಂದರ್ಭದಲ್ಲಿ ಸಮಾಜಕ್ಕೆಮಾದರಿಯಾಗುವ ಕಾರ್ಯಕ್ರಮಗಳನ್ನು ಆಯೋಜಿಸಿ. ನಿಮ್ಮ ಎಲ್ಲ ಕಾರ್ಯಕ್ರಮಗಳ ಜೊತೆಗೆ ನಾನಿರುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು.


ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ “ಸುವರ್ಣ ಸಂಭ್ರಮ“ ಲೋಗೋ ಅನಾವರಣ ಬುಧವಾರ ನಗರದ ಖಾಸಗಿ ಹೋಟೆಲ್  ಸಭಾಂಗ ಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ “ಸುವರ್ಣ ಸಂಭ್ರಮ“ ಲೋಗೋ ಅನಾವರಣಗೊಳಿಸಿ ಮಾತನಾಡುತ್ತಿದ್ದರು.


ಸದಾ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ದ.ಕ ಜಿಲ್ಲೆಯ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಸಮಾಜಕ್ಕೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಆಯೋಜಿಸಿ. ನಿಮ್ಮ ಎಲ್ಲ ಕಾರ್ಯಕ್ರಮಗಳ ಜೊತೆಗೆ ನಾನಿರುತ್ತೇನೆ“ ಎಂದು ರಾಜೇಂದ್ರ ಕುಮಾರ್ ಭರವಸೆ ನೀಡಿದರು.


ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಮಾತಾಡಿ, ”ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೇ ಸಮಾಜಕ್ಕೆ ನೆರವಾಗುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ವರ್ಷಪೂರ್ತಿ ಏನಾದರೊಂದು ಸಮಾಜಮುಖಿ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ಜನಪರ ಕಾಳಜಿಯನ್ನು ಇಲ್ಲಿನ ಪತ್ರಕರ್ತರು ತೋರಿಸುತ್ತಿದ್ದಾರೆ. ಇಂದಿನ ಪತ್ರಕರ್ತ ವಿದ್ಯಾರ್ಥಿಗಳು ಹಿರಿಯ ಪತ್ರಕರ್ತರು ಹಾಕಿಕೊಟ್ಟ ದಾರಿಯಲ್ಲಿ ನಡೆದು ಇತರರಿಗೆ ಮಾದರಿಯಾಗಬೇಕು. ಸುವರ್ಣ ಸಂಭ್ರಮದಲ್ಲಿರುವ ಜಿಲ್ಲೆಯ ಪತ್ರಕರ್ತರ ಸಂಘಕ್ಕೆ ಒಳ್ಳೇದಾಗಲಿ“ ಎಂದರು.


ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸಭಾಪತಿ  ಸಿ.ಎ.ಶಾಂತಾರಾಮ್ ಶೆಟ್ಟಿ ಮಾತನಾಡುತ್ತಾ, ”ಪತ್ರಿಕೆಗಳು ಸಮಾಜದ ಮೇಲೆ ಬೀರುವ ಪರಿಣಾಮ ಮಹತ್ವದ್ದಾಗಿದೆ.ಈ ಬಗ್ಗೆ ನನಗೆ ಅರಿವಿದೆ.ಜಿಲ್ಲೆಯ ಪತ್ರಕರ್ತರ ಬಗ್ಗೆ ಕಾಳಜಿ ಮತ್ತು ಹೆಮ್ಮೆಯಿದೆ. ಪತ್ರಕರ್ತರ ಸಮಾಜಮುಖಿ ಕೆಲಸ, ಪತ್ರಕರ್ತರು ಪ್ರೀತಿ ಮತ್ತು ವಿಶ್ವಾಸದಿಂದ ನಮಗೆ ಆಪ್ತರಾಗುತ್ತಾರೆ“ ಎಂದರು. 


ವೇದಿಕೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ನಿಕಟ ಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ಪೂರ್ವಾಧ್ಯಕ್ಷರಾದ ರಘುರಾಮ್, ಆನಂದ ಶೆಟ್ಟಿ, ರವೀಂದ್ರ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ, ಹರ್ಷ ಮತ್ತಿತರರು ಉಪಸ್ಥಿತರಿದ್ದರು.


ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಪ್ರಾಸ್ತಾವಿಕ ಮಾತನ್ನಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಧನ್ಯವಾದ ಸಮರ್ಪಿಸಿದರು. ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು.ಇದೇ ಸಂದರ್ಭದಲ್ಲಿ ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಾಮಾಗ್ರಿ ಹಾಗೂ ವೆನ್ಲಾಕ್ ಸಮುದಾಯ ವಾಚನಾಲಯಕ್ಕೆ ಪುಸ್ತಕಗಳನ್ನು ಅತಿಥಿಗಳು ವಿತರಿಸುವ ಸುವರ್ಣ ಸಂಭ್ರಮ ಚಟುವಟಿಕೆಗಳಿಗೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top