ಬಡವರ, ಮಧ್ಯಮ ವರ್ಗ, ಮಹಿಳೆಯರು, ರೈತರ ಪರ ಬಜೆಟ್: ನಳಿನ್ ಕುಮಾರ್ ಕಟೀಲ್

Upayuktha
0


ಮಂಗಳೂರು: ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ಅದರಲ್ಲೂ ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಆದಾಯ ತೆರಿಗೆ ವ್ಯಾಪ್ತಿಯನ್ನು 12 ಲಕ್ಷಕ್ಕೆ ಏರಿಸಲಾಗಿದೆ. ಇದರಿಂದ ಮಧ್ಯಮ ವರ್ಗದ ಬಹಳಷ್ಟು ಅನುಕೂಲ ವಾಗಲಿದೆ. ಇದಕ್ಕಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಕೃಷಿ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮ. ಸರ್ಕಾರ ರಾಜ್ಯಗಳೊಂದಿಗೆ ಸಹಭಾಗಿತ್ವದಲ್ಲಿ 100 ಜಿಲ್ಲೆಗಳನ್ನು ಒಳಗೊಂಡಿರುವಂತೆ ಈ ಯೋಜನೆ ರೈತಾಪಿ ವರ್ಗಕ್ಕೆ ಬಹಳ ಅನುಕೂಲವಾಗಲಿದೆ ಎಂದು ಹೇಳಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top