“ನೀರು ಉಳಿಸಿ” ಯುನಿಸೆಫ್ ಅಭಿಯಾನಕ್ಕೆ SKDRDP ಪೂರ್ಣ ಸಹಕಾರ: ಡಿ. ವೀರೇಂದ್ರ ಹೆಗ್ಗಡೆ

Upayuktha
0

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು “ನೀರು ಉಳಿಸಿ” ಕಾರ್ಯಕ್ರಮದ ವಾರ್ಷಿಕ ವರದಿಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.



ಉಜಿರೆ: ಯುನಿಸೆಫ್ ಹಮ್ಮಿಕೊಂಡಿರುವ “ನೀರು ಉಳಿಸಿ” ಅಭಿಯಾನಕ್ಕೆ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೂರ್ಣ ಸಹಕಾರ ನೀಡಲಾಗುವುದು ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.


ಅವರು ಧರ್ಮಸ್ಥಳದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೀರು ಉಳಿಸಿ ಕಾರ್ಯಕ್ರಮದ ವಾರ್ಷಿಕ ವರದಿಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಜಲಸಂರಕ್ಷಣೆ ಬಗ್ಗೆ ಯುನಿಸೆಫ್‌ನ ಕಾಳಜಿ ಹಾಗೂ ಪ್ರಯತ್ನ ಎಲ್ಲರಿಗೂ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೇಳಿ ಅವರನ್ನು ಅಭಿನಂದಿಸಿದರು. ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು.

ಹೈದ್ರಾಬಾದ್‌ನ ಯುನಿಸೆಫ್‌ನ  ಹಿರಿಯ ಅಧಿಕಾರಿಗಳಾದ ವೆಂಕಟೇಶ್ ಅರಳಿಕಟ್ಟೆ ಮತ್ತು ಡಾ. ಪ್ರಭಾತ್ ಮಟ್ಟಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಮುಖ್ಯ ಹಣಕಾಸು ಅಧಿಕಾರಿ ಶಾಂತಾರಾಮ ಪೈ ಹಾಗೂ ನಿಖಿಲೇಶ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top