ಉಳ್ಳಾಲ: ಉಳ್ಳಾಲ ಹಾಗೂ ಮುಡಿಪು ಬ್ಲಾಕ್ ಅಸಂಘಟಿತ ಕಾರ್ಮಿಕರ ಸಮಿತಿ ವತಿಯಿಂದ ಅಸಂಘಟಿತ ಕಾರ್ಮಿಕರ ನೋಂದಣಿ, ಕಿಟ್ ವಿತರಣೆ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ ನಾಟೆಕಲ್ ಅಲ್-ಮದೀನಾ ಸಭಾಂಗಣದಲ್ಲಿ ನಡೆಯಿತು.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತ ಡಿ.ಎಸ್ ಗಟ್ಟಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಗ್ರಾಮ ಗ್ರಾಮಕ್ಕೆ ಬಂದು ಮಾಹಿತಿ ಹಾಗೂ ಕಾರ್ಮಿಕರ ಕಿಟ್ ವಿತರಿಸುವ ಕಾರ್ಯ ಶ್ಲಾಘನೀಯ. ಕಾರ್ಮಿಕರು ಈ ಸೌಲಭ್ಯವನ್ನು ಸಂಪೂರ್ಣವಾಗಿ ಸದುಪಯೋಗಿಸಿಬೇಕು ಎಂದು ಹೇಳಿದರು.
ಅಸಂಘಟಿತ ಕಾರ್ಮಿಕ ಸಮಿತಿ ಜಿಲ್ಲಾಧ್ಯಕ್ಷ ಬಿ.ಎಂ ಅಬ್ಬಾಸ್ ಅಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್ ಅಸಂಘಟಿತ ಕಾರ್ಮಿಕರರಿಗೆ ಸರಕಾರ ನೀಡುವ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಅಸಂಘಟಿತ ಕಾರ್ಮಿಕರ ಸಮಿತಿ ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಸಾಹೇಬ್ ಪ್ರಸ್ತಾವಿಕ ಮಾತುಗಳನ್ನಾಡಿದರು.
ಮೂಡ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಮಂಗಳೂರು ತಾ.ಪಂ ಮಾಜಿ ಅಧ್ಯಕ್ಷ ಮೊಹಮ್ಮದ್ ಮೋನು, ಹಿರಿಯ ಕಾರ್ಮಿಕ ನಿರೀಕ್ಷಕ ವಿರೇಂದ್ರ ಕುಂಬಾರ್, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಅಚ್ಚುತ ಗಟ್ಟಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ದ.ಕ ಜಿಲ್ಲಾ ಪ್ರ.ಕಾರ್ಯದರ್ಶಿ ಜೆಸಿಂತ ಮೆಂಡೋನ್ಸ್, ಕಾರ್ಯದರ್ಶಿ ಇಸ್ಮಾಯಿಲ್ ಮೊರ್ಲ,
ಅಸಂಘಟಿತ ಕಾರ್ಮಿಕ ಸಮಿತಿ ಮುಡಿಪು ಅಧ್ಯಕ್ಷ ಮುರಳೀಧರ್ ಶೆಟ್ಟಿ, ದ.ಕ ಜಿಲ್ಲಾ ಇಂಟಕ್ ಉಪಾಧ್ಯಕ್ಷ ಕೆ.ಎಂ ಕುಂಞ ಬಾವಾ, ಪ್ರಸಾದ್ ನೇತ್ರಾಲಯದ ಪಿಆರ್ ಒ ಆಶೀಕ್ ಸಾಲಿಯಾನ್, ಉಪಸ್ಥಿತರಿದ್ದರು.
ಅಬ್ದುಲ್ ರಹ್ಮಾನ್ ಕೋಡಿಜಾಲ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ