ಪಣಜಿ (ವಾಸ್ಕೊ): ಗೋವಾದ ವಾಸ್ಕೊದಿಂದ ಸೊಲ್ಲಾಪುರ ರೈಲು ಓಡಾಟ ಆರಂಭಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಕಳೆದ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದೇವೆ. ಇದೀಗ ರಾಜ್ಯಸಭಾ ಸದಸ್ಯರಾದ ಸದಾನಂದ ತಾನಾವಡೆ ರವರು ರಾಜ್ಯಸಭೆಯಲ್ಲಿ ಈ ವಿಷಯ ಪ್ರಸ್ತಾಪಕ್ಕೆ ತಂದಿದ್ದಾರೆ. ಇದರಿಂದಾಗಿ ಶೀಘ್ರವೇ ವಾಸ್ಕೊ-ಸೊಲ್ಲಾಪುರ ರೈಲು ಓಡಾಟ ಆರಂಭಗೊಳ್ಳುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಗೋವಾ ರಾಜ್ಯಾಧ್ಯಕ್ಷ ಮಂಜುನಾಥ ನಾಟೀಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಾಸ್ಕೊದಲ್ಲಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕಛೇರಿಯಲ್ಲಿ ಆಯೋಜಿಸಿದ್ದ ರಕ್ಷಣಾ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಕಳೆದ ಹಲವು ವರ್ಷಗಳಿಂದ ವಾಸ್ಕೊ-ಸೊಲ್ಲಾಪುರ ರೈಲು ಓಡಾಟ ಆರಂಭಿಸುವಂತೆ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರಿಗೆ, ಸಚಿವ ಸಂಕಲ್ಪ ಅಮೋಣಕರ್ ರವರಿಗೆ ಹಾಗೂ ರಾಜ್ಯಸಭಾ ಸದಸ್ಯ ಸದಾನಂದ ತಾನಾವಡೆ ರವರಿಗೆ ಮನವಿ ಸಲ್ಲಿಸುತ್ತಾ ಬಂದಿದ್ದೇವೆ. ಇದೀಗ ಸದಾನಂದ ತಾನಾವಡೆ ಮತ್ತು ಸಂಕಲ್ಪ ಅಮೋಣಕರ್ ರವರು ಹೆಚ್ಚಿನ ಆಸಕ್ತಿ ವಹಿತಿ ಈ ರೈಲು ಓಡಾಟ ಆರಂಭಕ್ಕೆ ಹೆಚ್ಚಿನ ಪ್ರಯತ್ನ ಮಾಡಿದ್ದಾರೆ. ಇದಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಅವರಿಗೆ ಧನ್ಯವಾದ ಸಲ್ಲಿಸುತ್ತೇವೆ ಎಂದು ಮಂಜುನಾಥ ನಾಟೀಕರ್ ನುಡಿದರು.
ಈ ಸಂದರ್ಭದಲ್ಲಿ ಕರವೇ ರಾಜ್ಯ ಉಪಾಧ್ಯಕ್ಷ ಯಶವಂತ್ ಕಿಂಗ್, ರಾಜ್ಯ ಉಪಾಧ್ಯಕ್ಷ ರುದ್ರಯ್ಯ ಹಿರೇಮಠ, ರಾಜ್ಯ ಸಹ ಕಾರ್ಯದರ್ಶಿ ಶಿವು ತಳವಾರ್, ಕರವೇ ದಾಬೋಲಿಮ್ ಘಟಕದ ಅಧ್ಯಕ್ಷ ರಾಜು ಹರಿಜನ್, ಶಂಕ್ರು ಚಲವಾದಿ, ಬಸು ಮುರಾಳ, ಸಂಗಪ್ಪ ಹರಿಜನ್, ಆನಂದ್ ಮಾದರ, ಸಿದ್ದು ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ