ಅದ್ದೂರಿ ಮೆರವಣಿಗೆಯೊಂದಿಗೆ ಭಗವಾನ್ ಚಂದ್ರನಾಥ ಸ್ವಾಮಿ ನೂತನ ಬಿಂಬದ ಆಗಮನ
ಬಂಟ್ವಾಳ: ವಿಟ್ಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭಗವಾನ್ ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ ಹಾಗೂ ಶ್ರೀ ಯಕ್ಷಿ ಪದ್ಮಾವತಿ ಅಮ್ಮನವರ ಮತ್ತು ಶ್ರೀ ಯಕ್ಷಿ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವದ ಕಾರ್ಯಕ್ರಮ ಫೆ.13ರಿಂದ 17ರ ವರೆಗೆ ನಡೆಯಲಿದೆ.
ಇದಕ್ಕೆ ಪೂರಕವಾಗಿ ಇಂದು ಬೆಳಗ್ಗೆ ಭಗವಾನ್ ಚಂದ್ರನಾಥ ಸ್ವಾಮಿ ನೂತನ ಬಿಂಬವನ್ನು ಆರ್ಕುಳದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿನ ಸದಸ್ಯರನ್ನೊಳಗೊಂಡು ಅದ್ದೂರಿ ಮೆರವಣಿಗೆಯೊಂದಿಗೆ ಮೇಗಿನಪೇಟೆ ಜೈನ ಬಸದಿಗೆ ತರಲಾಯಿತು.
ಈ ಕಾರ್ಯಕ್ರಮದಲ್ಲಿ ಸಮಿತಿಯ ಕಾರ್ಯದರ್ಶಿ ದರ್ಶನ್ ಜೈನ್, ಅಧ್ಯಕ್ಷ ಹಿತೇಶ್ ಎಂ.ಡಿ, ಬಸದಿಯ ಆಡಳಿತ ಮುಖ್ಯಸ್ಥ ವಿನಯ್ ಕುಮಾರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ, ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ, ಯೋಜನಾಧಿಕಾರಿ ದಿಲೀಪ್ ಕುಮಾರ್, ಯೋಜನಾಧಿಕಾರಿ ರಮೇಶ್ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು ಹಾಗೂ ಯೋಜನೆಯ ಕೃಷಿಯಾಧಿಕಾರಿ ಚಿದಾನಂದ, ವಲಯ ಮೇಲ್ವಿಚಾರಕಿ ಸರಿತಾ ಕೆ. ಎಸ್ ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ