ಜಯನಗರ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಥೋತ್ಸವ ಪಲ್ಲಕ್ಕಿ ಉತ್ಸವ

Upayuktha
0



ಬೆಂಗಳೂರು : ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠಾಧೀಶರಾದ  ಪರಮಪೂಜ್ಯ  ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗುರುವಾರದ ಪ್ರಯುಕ್ತ ಬೆಳಗ್ಗೆ ಗುರುರಾಯರ ಬೃಂದಾವನಕ್ಕೆ ಅಷ್ಟೋತ್ತರ ಸಹಿತ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಕನಕಾಭಿಷೇಕ, ಅನ್ನದಾನ ಸೇವೆಗಳು ಜರುಗಿದವು. 


ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ ಪಲ್ಲಕ್ಕಿ ಉತ್ಸವ ಗಜವಾಹನೋತ್ಸವ ತೊಟ್ಟಿಲು ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವೈಷ್ಣವಿ ಕೊಪ್ಪ ಮತ್ತು ಸಂಗಡಿಗರಿಂದ ಸಂಗೀತ ಸೇವೆ ಕಾರ್ಯಕ್ರಮಗಳು ಏರ್ಪಡಿಸಿತ್ತು ಎಂದು ಶ್ರೀಮಠದ ಪುರೋಹಿತರಾದ ನಂದಕಿಶೋರ್ ಆಚಾರ್ಯರು ತಿಳಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top