ಮೃತರು ಪೈವಳಿಕೆ ಬಾಯಿಕಟ್ಟೆ ನಿವಾಸಿಗಳು
ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66ರ ವಾಮಂಜೂರು ಚೆಕ್‌ಪೋಸ್ಟ್‌ನ ಸೇತುವೆಯ ಬಳಿ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ.
ಉಪ್ಪಳ ಪೈವಳಿಕೆ ಸಮೀಪದ ಬಾಯಿಕಟ್ಟೆ ನಿವಾಸಿಗಳಾದ ಜನಾರ್ದನ, ಅವರ ಮಕ್ಕಳಾದ ವರುಣ್ ಹಾಗೂ ಕಿಶನ್ ಸಾವನ್ನಪ್ಪಿದವರು. ಕಾರಿನಲ್ಲಿದ್ದ ರತ್ನ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮಂಜೇಶ್ವರ ಪೊಲೀಸರು ಮೃತದೇಹಗಳನ್ನು ಸ್ಥಳೀಯರು ಶವಾಗಾರಕ್ಕೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ