ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಸ್ವಚ್ಛತಾ ಶಿಕ್ಷಣ ಸಿಗಬೇಕು: ಕೃಷ್ಣಮೂರ್ತಿ ಚಿತ್ರಾಪುರ

Chandrashekhara Kulamarva
0

ಸುರತ್ಕಲ್: ಪ್ರಾಥಮಿಕ ಶಿಕ್ಷಣದ ಹಂತದಲ್ಲಿಯೇ ಮಕ್ಕಳಿಗೆ ಸ್ವಚ್ಚತಾ ಶಿಕ್ಷಣ ದೊರೆಯಬೇಕು. ಸರಕಾರಿ ಪ್ರಾಥಮಿಕ ಶಾಲೆಗಳ ಅಭಿವೃದ್ದಿಗೆ ಸ್ವಯಂ ಸೇವಾ ಸಂಸ್ಥೆಗಳು ಸ್ಪಂದಿಸಿ ಸೇವಾ ಯೋಜನೆ ನಡೆಸುತ್ತಿರುವುದು ಅಭಿನಂದನೀಯ ಎಂದು ಚಿತ್ರಾಪುರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರಾಥಮಿಕ ಶಾಲೆ ಯ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಚಿತ್ರಾಪುರ ನುಡಿದರು.


ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಹಾಗೂ ರಾಹುಲ್ ಮೆಮೋರಿಯಲ್ ಫೌಂಡೇಷನ್ ಸಹಭಾಗಿತ್ವದಲ್ಲಿ ನಡೆಸುತ್ತಿರುವ ರಾಜಕೇಸರಿ ಸ್ವಚ್ಚಾಲಯ ಅಭಿಯಾನ ಯೋಜನೆಯಲ್ಲಿ ಚಿತ್ರಾಪುರ ಸರಕಾರಿ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ಸ್ವಯಂ ಸೇವೆಯ ಮೂಲಕ ಶುಚಿಗೊಳಿಸಿ ನವೀಕರಿಸಿ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಸ್ವಚ್ಚತಾ ಸೇನಾನಿಗಳನ್ನು ಅಭಿನಂದಿಸಿ ಮಾತನಾಡಿದರು.


ರಾಜಕೇಸರಿ ಟ್ರಸ್ಟ್ ನ ಸಂತೋಷ್ ಕೊಲ್ಯ, ಮನೋಜ್ ಕುಮಾರ್, ವರುಣ್ ಕುಮಾರ್ ಹಾಗೂ ಲೋಕೇಶ್ ಕುಲಾಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.


ಸಂತೋಷ್ ಕುಮಾರ್ ಕೊಲ್ಯ ಮಾತನಾಡಿ, ಸರಕಾರಿ ಪ್ರಾಥಮಿಕ ಶಾಲೆಗಳ ಶೌಚಾಲಯಗಳು ಚೆನ್ನಾಗಿ ಇರಬೇಕು ಎಂಬುದು ಟ್ರಸ್ಟ್ ನ ಆಶಯ ವಾಗಿದ್ದು ಸಂಘದ ಸದಸ್ಯರು ತಮ್ಮ ವಿರಾಮದ ವೇಳೆಯಲ್ಲಿ ಸೇವಾ ಕಾರ್ಯವನ್ನು ನಡೆಸುತ್ತಿದ್ದಾರೆ. ಶುಚಿತ್ವದ ಶೌಚಾಲಯ ಮಕ್ಕಳ ಹಕ್ಕಾಗಿದ್ದು ಸರಕಾರ ಮತ್ತು ಸಮಾಜ ಸ್ಪಂದಿಸಬೇಕಾಗಿದೆ ಎಂದರು.


ಕೂಳೂರು ಮೊಗವೀರ ಮಹಾಸಭಾದ ಅಧ್ಯಕ್ಷ ಭರತ್ ಕುಮಾರ್ ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ್ದ ಪಣಂಬೂರು ಮೊಗವೀರ ಮಹಾಸಭಾದ ಅಧ್ಯಕ್ಷ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಸುವರ್ಣ ಮಾತನಾಡಿ,  ರಾಜಕೇಸರಿ ಸಂಸ್ಥೆ ಸಾಮಾಜಿಕ ಸೇವಾ ಯೋಜನೆ ಗಳ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡುತ್ತಿದೆ ಎಂದರು.


ರಾಹುಲ್ ಮೆಮೋರಿಯಲ್ ಫೌಂಡೇಷನ್ ನ ಅರುಣ್ ಬೆಂಗಳೂರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯ ತೇಜಪಾಲ್ ಕೂಳೂರು, ಗೋವಿಂದ ದಾಸ ಕಾಲೇಜ್ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಕುಮಾರ್, ನವೀನ ಕುಮಾರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶೋಭ ಸ್ವಾಗತಿಸಿದರು. ಜೆಸಿಂತಾ ವಂದಿಸಿದರು. ನೀತಾ ತಂತ್ರಿ ಕಾರ್ಯಕ್ರಮ ಸಂಯೋಜಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top