ಕೇವಲ ಘೋಷಣೆಗಳಿಗಷ್ಟೇ ಸೀಮಿತವಾದ ಕಾಂಗ್ರೆಸ್ ಬಜೆಟ್: ಅಧಿವೇಶನದಲ್ಲಿ ಶಾಸಕ ಕಾಮತ್

Upayuktha
0



ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕಳೆದ ಎರಡು ವರ್ಷಗಳ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳ ಪಾಲಿಗೆ ಅಭಿವೃದ್ಧಿಯ ಘೋಷಣೆಯನ್ನೂ ಮಾಡಿಲ್ಲ, ಮಾಡಿದ ಅಲ್ಪಸ್ವಲ್ಪ ಘೋಷಣೆಯನ್ನು ಅನುಷ್ಠಾನಕ್ಕೆ ತಂದಿಲ್ಲವೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.


ಕಾಂಗ್ರೆಸ್ ಸರ್ಕಾರದ ಪಾಲಿಗೆ ಬಜೆಟ್ ಎಂಬುದು ಕೇವಲ ಹಾಳೆಗಳ ಮೇಲಿನ ಅಕ್ಷರಗಳು ಅಷ್ಟೇ ಆದರೆ ಮುಖ್ಯಮಂತ್ರಿಗಳು ಗಂಟೆಗಟ್ಟಲೆ ನಿಂತು ಬಜೆಟ್ ಭಾಷಣ ಮಾಡುವುದು ಯಾಕೆ? ನಾವೆಲ್ಲ ಅದನ್ನು ಕೇಳಿಸಿಕೊಳ್ಳುವುದು ಯಾಕೆ? ಈ ಅಧಿವೇಶನ ಯಾಕೆ? ನನ್ನ ಬಳಿ 2023-24 ಹಾಗೂ 2024-25 ಸಾಲಿನ ಬಜೆಟ್ ನಲ್ಲಿ ಇದೇ ಸರ್ಕಾರ ಮೀನುಗಾರಿಕೆಗೆ, ಪ್ರವಾಸೋದ್ಯಮಕ್ಕೆ, ವಾಣಿಜ್ಯ ಕ್ಷೇತ್ರಕ್ಕೆ ಸೇರಿದಂತೆ ಕೆಲವೇ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಬಜೆಟ್ ನಲ್ಲೇ ಘೋಷಿಸಿರುವ ಪಟ್ಟಿ ಇವೆ. ಅವುಗಳಲ್ಲಿ ಯಾವುದನ್ನು ಸರ್ಕಾರ ಸಮರ್ಥವಾಗಿ ಅನುಷ್ಠಾನಗೊಳಿಸಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸರ್ಕಾರಕ್ಕೆ ಸವಾಲೆಸೆದರು.


ಸದ್ಯ ಕರಾವಳಿ ಜಿಲ್ಲೆಗಳ ಜನತೆ ಕೇವಲ ಘೋಷಣೆಗಳನ್ನು ಕೇಳಿಸಿಕೊಂಡು ಕುಣಿದು ಕುಪ್ಪಳಿಸಬೇಕಷ್ಟೇ ಎಂಬಂತಹ ವಾತಾವರಣ ನಿರ್ಮಾಣ ವಾಗಿರುವುದು ದುರಂತವಾಗಿದ್ದು, ಕರಾವಳಿಯ ಸಮಗ್ರ ಅಭಿವೃದ್ಧಿಯ ವಿಚಾರದಲ್ಲಿ ಶೂನ್ಯ ಸಂಪಾದನೆಯೇ ಈ ಸರ್ಕಾರದ ದೊಡ್ಡ ಸಾಧನೆ ಎಂದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top