ದಾವಣಗೆರೆ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕಲಾಕುಂಚ ಮಹಿಳಾ ವಿಭಾಗದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 9 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಲಾಕುಂಚ ಕಛೇರಿ ಸಭಾಂಗಣದಲ್ಲಿ “ದಾವಣಗೆರೆ ಗೃಹಿಣಿ ಸ್ಪರ್ಧೆ” ಉದ್ಘಾಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಲಲಿತಾ ಕಲ್ಲೇಶ್ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಹೋಮಿಯೋಪತಿ ವೈದ್ಯೆ, ಅನಂತ ಚೇತನ ಪರಿವಾರದ ಸಂಸ್ಥಾಪಕರಾದ ಡಾ|| ಆರತಿ ಸುಂದರೇಶ್ ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಾವಣಗೆರೆಯ ಆರ್ಯುವೇದ ವೈದ್ಯೆ ಹಾಗೂ ಭರತಾಂಜಲಿ ಭರತನಾಟ್ಯ ಸಂಸ್ಥೆಯ ಸಂಸ್ಥಾಪಕರಾದ ಡಾ|| ಮಂಗಳಾ ಶೇಖರ್ ಆಗಮಿಸಲಿದ್ದಾರೆ. ಕಲಾಕುಂಚ ಡಿಸಿಎಂ ಶಾಖೆಯ ಅಧ್ಯಕ್ಷರಾದ ಶಾರದಮ್ಮ ಶಿವನಪ್ಪ, ಎಲೆಬೇತೂರು ಶಾಖೆಯ ಅಧ್ಯಕ್ಷರಾದ ಡಾ|| ನಿರ್ಮಲಾ ಕುಲಕರ್ಣಿ ವೇದಿಕೆಯಲ್ಲಿ ಗೌರವ ಉಪಸ್ಥಿತರಿರುತ್ತಾರೆ ಎಂದು ಕಲಾಕುಂಚದ ಮಹಿಳಾ ವಿಭಾಗದ ಸಮಿತಿ ಸದಸ್ಯರಾದ ಶಿಲ್ಪಾ ಉಮೇಶ್ ತಿಳಿಸಿದ್ದಾರೆ.
ಪ್ರತಿಭಾವಂತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾರಂಭ ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶೆಣೈ ವಿನಂತಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ