ಕ.ಚು.ಸಾ. ಪರಿಷತ್ ದ.ಕ. ಜಿಲ್ಲಾಧ್ಯಕ್ಷರಾಗಿ ಡಾ. ಕೊಲಚಪ್ಪೆ ಗೋವಿಂದ ಭಟ್ ಆಯ್ಕೆ

Upayuktha
0


ಬಂಟ್ವಾಳ: ಕಾಸರಗೋಡು ಕನ್ನಡ ಭವನ ಗ್ರಂಥಾಲಯ ರೂವಾರಿಗಳಾದ ಡಾ. ವಾಮನ್ ರಾವ್ -ಸಂಧ್ಯಾರಾಣಿ ದಂಪತಿಗಳು ಸ್ಥಾಪಿಸಿದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕಾಸರಗೋಡು ಜಿಲ್ಲಾ ಘಟಕದ "ಕೀರಿಕಾಡು ಮಾಸ್ಟರ್ ವಿಷ್ಣು ಭಟ್ "ಸಂಸ್ಮರಣೆ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಲೇಖಕ ಡಾ. ಕೊಲಚಪ್ಪೆ ಗೋವಿಂದ ಭಟ್, ಕಾರ್ಯದರ್ಶಿಯಾಗಿ ಅಪೂರ್ವ ಕಾರಂತ್ ಪುತ್ತೂರು ಇವರನ್ನು ಆಯ್ಕೆ ಮಾಡಲಾಗಿದೆ.


ಕನ್ನಡ ಚು.ಸಾ.ಪ ಕರ್ನಾಟಕ ರಾಜ್ಯ ಸಂಚಾಲಕ ಜಯಾನಂದ ಪೆರಾಜೆ ನಾಮನಿರ್ದೇಶನ ಮಾಡಿದರು. ಇನ್ನೋರ್ವ ಸಂಚಾಲಕರಾದ ಡಾ. ಶಾಂತ ಪುತ್ತೂರು ಇವರು ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಡಾ. ಕೆ. ಗೋವಿಂದ ಭಟ್ ಮತ್ತು ಅಪೂರ್ವ ಕಾರಂತ್ ಇವರಿಗೆ ಸಂಸ್ಥೆಯ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ಟೀಚರ್ ಹಾಗೂ ಗೌರವಾಧ್ಯಕ್ಷರಾದ ಶಿಕ್ಷಣ ತಜ್ಞ, ಸಾಹಿತಿ ವಿ.ಬಿ. ಕುಳಮರ್ವ ಕನ್ನಡ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು.


ಅಧಿಕಾರ ಸ್ವೀಕರಿಸಿದ ಡಾ. ಕೊಲಚಪ್ಪೆ ಗೋವಿಂದ ಭಟ್, ಅಪೂರ್ವ ಕಾರಂತ್ ಇವರಿಗೆ ಶಾಲು ಹೊದಿಸಿ, ಅಧಿಕಾರ ಪತ್ರ, ಕಾರ್ಯಸೂಚಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾಧ್ಯಕ್ಷ ವಿರಾಜ್ ಅಡೂರ್, ಕೋಶಾಧಿಕಾರಿ ಸಂಧ್ಯಾರಾಣಿ, ಸಂಘಟನಾ ಕಾರ್ಯದರ್ಶಿ ಶಾರದಾ ಮೊಳೆಯಾರ್, ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ, ಕರ್ನಾಟಕ ರಾಜ್ಯ ಸಂಚಾಲಕಿ ಡಾ ಶಾಂತ ಪುತ್ತೂರು ಜತೆಗಿದ್ದರು.


ಅಧ್ಯಕ್ಷ ಸ್ಥಾನ ಸ್ವೀಕರಿಸಿದ ಡಾ. ಕೊಲಚಪ್ಪೆ ಗೋವಿಂದ ಭಟ್ ತನ್ನ ಕೃತಜ್ಞತಾ ಭಾಷಣದಲ್ಲಿ "ದಕ್ಷಿಣ ಕನ್ನಡ ಜಿಲ್ಲಾ ಘಟಕವನ್ನು ಶೀಘ್ರದಲ್ಲಿ ವಿಸ್ತರಿಸಿ ಬರುವ ಏಪ್ರಿಲ್ ತಿಂಗಳಲ್ಲಿ 100 ಮಂದಿ ಚುಟುಕು ಕವಿಗಳ ಕವಿಗೋಷ್ಠಿಯೊಂದಿಗೆ ಮಂಗಳೂರಿನಲ್ಲಿ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top