ಉಡುಪಿ: ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇವರ ಆಶ್ರಯದಲ್ಲಿ ಕೆ.ಎಲ್.ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಮಹಾವಿದ್ಯಾಲಯ ಹಾವೇರಿ ಮತ್ತು ಗೌರಮ್ಮ ಬ. ಅಂಕಲಕೋಟಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ, ಶಿಗ್ಗಾವಿ ಇವರ ಸಹಯೋಗದಲ್ಲಿ ಡಾ.ಶಿವರಾಮ ಕಾರಂತರ ಬರಹಗಳು : ಸಮಕಾಲೀನ ಚಿಂತನೆ ಎಂಬ ವಿಷಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಾರ್ಚ್ 21 ರಂದು ಹಾವೇರಿಯ ಜಿ.ಎಚ್ ಕಾಲೇಜು ಸಭಾಭವನದಲ್ಲಿ ಅಯೋಜಿಸಲಾಗಿದೆ.
ವಿಚಾರ ಸಂಕಿರಣದಲ್ಲಿ ಪ್ರಬಂಧ ಮಂಡನೆಗೆ ಅವಕಾಶವಿದ್ದು, ನಾಡಿನ ಗಣ್ಯ ಸಂಪನ್ಮೂಲ ವ್ಯಕ್ತಿಗಳು ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ. ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಸಂಘಟನಾ ಕಾರ್ಯದರ್ಶಿ ಡಾ. ಕೆ ಶಮಂತಕುಮಾರ ಕೆ.ಎಸ್ ಮೊ.ನಂ: 8147404640 ಮತ್ತು ಟ್ರಸ್ಟಿನ ಮೊ.ನಂ: 6362517472 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ