ಆನೇಕಲ್ ನ ಐದು ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ

Upayuktha
0

ಕರ್ನಾಟಕ ಮಂದಿರ ಮಹಾಸಂಘದಿಂದ ಪರಂಪರೆಯ ರಕ್ಷಣೆಗೆ ವಿಶೇಷ ಪ್ರಯತ್ನ



ಬೆಂಗಳೂರು: ಇಂದು ದೇಶದಲ್ಲಿನ ಅನೇಕ ದೇವಸ್ಥಾನಗಳು, ಗುರುದ್ವಾರ, ಚರ್ಚ್, ಮಸೀದಿ ಮತ್ತು ಇತರ ಪ್ರಾರ್ಥನಾ ಸ್ಥಳಗಳು, ಖಾಸಗಿ ಕಂಪನಿ, ಶಾಲಾ-ಕಾಲೇಜು, ನ್ಯಾಯಾಲಯ, ಪೋಲೀಸ್ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜೈನ್ ನ ಮಹಾಕಾಲೇಶ್ವರ ದೇವಸ್ಥಾನ, ವಾರಾಣಸಿಯ ಶ್ರೀಕಾಶಿ ವಿಶ್ವೇಶ್ವರ ದೇವಸ್ಥಾನ, ತಿರುಪತಿ ಬಾಲಾಜಿ ದೇವಸ್ಥಾನ, ಕೇರಳದ ಪ್ರಸಿದ್ಧ ಪದ್ಮನಾಭಸ್ವಾಮಿ ದೇವಸ್ಥಾನ, ಹೀಗೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಅನೇಕ ವರ್ಷಗಳಿಂದ ಭಕ್ತರಿಗಾಗಿ ಸಾತ್ತ್ವಿಕ ವಸ್ತ್ರ ಸಂಹಿತೆ ಜಾರಿಯಿದೆ. 


ಇಂದು ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಸುಬ್ರಹ್ಮಣ್ಯ ದೇವಸ್ಥಾನ, ಹೆಬ್ಬಗೋಡಿಯ ಪಟಾಲಮ್ಮ ದೇವಸ್ಥಾನ, ಹೆಬ್ಬಗೋಡಿಯ ಕೋದಂಡರಾಮ ದೇವಸ್ಥಾನ, ಹೆಬ್ಬಗೋಡಿಯ ಗ್ರಾಮದೇವತೆ ಓನಮ್ಮ ದೇವಸ್ಥಾನ, ವಿನಾಯಕ ನಗರದ ಸರ್ವ ಸಿದ್ಧಿ ವಿನಾಯಕ ದೇವಾಲಯದಲ್ಲಿ ಸ್ಕರ್ಟ್, ಮಿಡಿ, ಸ್ಲೀವ್‌ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ. ಅದರ ಆಧಾರದಲ್ಲಿ ದೇವಸ್ಥಾನದ ಪಾವಿತ್ರ್ಯತೆ, ಶಿಷ್ಟಾಚಾರ, ಸಂಸ್ಕೃತಿ ಕಾಪಾಡುವುದಕ್ಕಾಗಿ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಯಿತು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top