ಮುಂಡಾಜೆ: ನಿವೃತ್ತ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

Chandrashekhara Kulamarva
0

ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ




ಮುಂಡಾಜೆ: ಶ್ರೀಮತಿ ಜಾಲಿ ಓ ಎ ಅವರು ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ 1991ರಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸೇವೆಗೆ ಸೇರಿ, 2004ರಿಂದ ಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿ, ಸುಮಾರು 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಫೆ.28ರಂದು ವಯೋ ನಿವೃತ್ತಿ ಹೊಂದಿದರು.


ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಕಾರ್ಯದರ್ಶಿ ಕೃಷ್ಣ ಭಟ್ ರವರು ನಿವೃತ್ತರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಖಜಾಂಚಿ ಅಚ್ಯುತ ನಾಯಕ್, ಶತಾಬ್ದಿ ವಿದ್ಯಾಲಯ ಸಮಿತಿ ಮುಂಡಾಜೆಯ ಸಂಚಾಲಕ ನಾರಾಯಣ ಫಡ್ಕೆ, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯ ಅಧ್ಯಕ್ಷ ವಿನಯಚಂದ್ರ, ಸದಸ್ಯ ವಿಶ್ವನಾಥ ಶೆಟ್ಟಿ, ಶ್ರೀಮತಿ ಭಾರತಿ ಫಡ್ಕೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ಸಹ ಪ್ರಾಧ್ಯಾಪಕ ಡಾ. ರವಿ ಎಂ. ಎನ್ ರವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ನೂತನ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top