'ಮಲಬಾರ್ ವಿಶ್ವರಂಗ ಪುರಸ್ಕಾರ-2025ಕ್ಕೆ' ಐವರು ಹಿರಿಯ ರಂಗಕರ್ಮಿಗಳ ಆಯ್ಕೆ

Upayuktha
0


ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪ್ರದಾನ ಮಾಡುತ್ತಿರುವ ಆರನೇ ವರ್ಷದ 'ಮಲಬಾರ್ ವಿಶ್ವರಂಗ ಪುರಸ್ಕಾರ 2025ಕ್ಕೆ' ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ.


ಅರವಿಂದ ಕುಲಕರ್ಣಿ ಧಾರವಾಡ (ರಂಗ ನಟ, ಸಂಘಟಕ ಹಾಗೂ ನಿರ್ದೇಶಕ), ಗಣೇಶ್ ಕಾರಂತ್ ಬೈಂದೂರು (ರಂಗ ಸಂಘಟಕ ಹಾಗೂ ನಿರ್ದೇಶಕ), ಪ್ರಿಯಾ ಸರೋಜಾದೇವಿ ಮುಂಬೈ (ರಂಗನಟಿ ಹಾಗೂ ಕಂಠದಾನ ಕಲಾವಿದೆ), ಪ್ರಕಾಶ್ ಜಿ. ಕೊಡವೂರು (ರಂಗನಟ ಹಾಗೂ ಸಂಘಟಕ), ಮಂಜುಳಾ ಜನಾದ೯ನ್ ಮಂಗಳೂರು (ರಂಗನಟಿ) ಇವರಿಗೆ ಮಾರ್ಚ್ 26 ರಂದು  ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ, ನಗದು ಹಾಗೂ ಬೆಳ್ಳಿ ಪದಕದೊಂದಿಗೆ 'ಮಲಬಾರ್ ವಿಶ್ವರಂಗ ಪುರಸ್ಕಾರ-2025' ಪ್ರದಾನ ಮಾಡಲಾಗುವುದು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top