ತುಳು ರಾಜ್ಯ ಸ್ಥಾಪನೆ ಅಗತ್ಯ: ಹರಿಕೃಷ್ಣ ಪುನರೂರು

Upayuktha
0


ಮಂಗಳೂರು: ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಸೇರಬೇಕು, ಅದರೊಂದಿಗೆ ತುಳು ರಾಜ್ಯ ಸ್ಥಾಪನೆ ಆಗಬೇಕು ಎಂದು ಧರ್ಮದರ್ಶಿ ಹರಿಕೃಷ್ಣ ಪುನರೂರು ಆಶಿಸಿದರು.


ತುಳು ಕೂಟ ಕುಡ್ಡದ 50ನೇ ವರ್ಷಾಚರಣೆ 'ಬಂಗಾರ್ ಪರ್ಬ' ಆಚರಣೆ ಸಮಿತಿ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಗೋವಾ ಪ್ರತ್ಯೇಕ ರಾಜ್ಯವಾಗಬಹುದು ಎಂದಾದರೆ ತುಳು ನಾಡು ಯಾಕಾಗಬಾರದು ಎಂದು ಪ್ರಶ್ನಿಸಿದರು.


ಅವಿಭಜಿತ ದಕ್ಷಿಣ ಕನ್ನಡ, ಕಾಸರಗೋಡು, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ತುಳು ಮಾತನಾ ಡುವವರು ಇದ್ದಾರೆ. ಶಾಲೆಯಲ್ಲಿ ತುಳು ಒಂದು ಭಾಷೆಯಾಗಿ ಕಲಿಸುವುದನ್ನು ಕಡ್ಡಾಯ ಮಾಡಬೇಕು ಎಂದರು.


ಸಂಸದ ಕ್ಯಾ, ಬ್ರಿಜೇಶ್ ಚೌಟ, ವೇದವ್ಯಾಸ ಕಾಮತ್, ಮುಖಂಡ ಎ.ಸಿ.ಭಂಡಾರಿ, ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಳಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್, ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಗಣೇಶ್ ಶೆಟ್ಟಿ, ಜಿಲ್ಲಾ ಮೂರ್ತೆದಾರರ ಮಹಾಮಂಡಲದ ನಿರ್ದೇಶಕ ವಿಜಯ ಕುಮಾರ್ ಸೊರಕೆ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಹರಿಕಥಾ ಪರಿಷತ್ ಅಧ್ಯಕ್ಷ ಮಹಾಬಲ ಶೆಟ್ಟಿ, ತುಳುಕೂಟದ ಉಪಾಧ್ಯಕ್ಷ ಬಿ.ಪದ್ಮನಾಭ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ ಪಾಲ್ಗೊಂಡಿದ್ದರು.


ತುಳು ಕೂಟದ ಅಧ್ಯಕ್ಷೆ ಹೇಮಾ ದಾಮೋದರ ನಿಸರ್ಗ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜಿ.ವಿ ಶೆಟ್ಟಿ ಸ್ವಾಗತಿಸಿದರು. ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top