ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿ: ಮಂಜುನಾಥ್

Upayuktha
0



ಹಾಸನ: ಎಸ್.ಎಸ್. ಎಲ್. ಸಿ. ಪರೀಕ್ಷೆಯು ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟವಾಗಿದೆ. ಅದನ್ನು ವಿದ್ಯಾರ್ಥಿಗಳು ಒತ್ತಡರಹಿತವಾಗಿ ಎದುರಿಸಿ ಯಶಸ್ಸು ಗಳಿಸಲು ಅಗತ್ಯ ಸಲಹೆ ಸೂಚನೆಗಳನ್ನು ಉಪಪ್ರಾಂಶುಪಾಲ ಮಂಜುನಾಥ್ ನೀಡಿದರು. 


ನಗರದ ಆರ್. ಸಿ. ರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಪ್ರಧಾನ ಶಾಲೆಯಲ್ಲಿ 2024- 25ನೇ ಸಾಲಿನ ಎಸ್.ಎಸ್ ಎಲ್ ಸಿ ವಿದ್ಯಾರ್ಥಿನಿಯರಿಗೆ ಪ್ರವೇಶ ಪತ್ರವನ್ನು ವಿತರಿಸಿ ಮಾತನಾಡುತ್ತಾ ಈ ಬಾರಿಯ ಎಸ್.ಎಸ್ ಎಲ್ ಸಿ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕು.


ಇದಕ್ಕಾಗಿ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಗಾಗ್ಗೆ ಸಭೆಗಳನ್ನು ನಡೆಸಿ ಅಗತ್ಯ ಕ್ರಮವಹಿಸಲು ಸೂಚಿಸಿರುತ್ತಾರೆ. ವಿದ್ಯಾರ್ಥಿಗಳು ಭಯರಹಿತವಾಗಿ, ಒತ್ತಡ ರಹಿತವಾಗಿ ಪರೀಕ್ಷೆ ಬರೆಯಲು ಪೋಷಕರೂ ಸಹಕರಿಸಬೇಕು. ವಿಷಯವಾರು ಶಿಕ್ಷಕರು ನೀಡಿರುವ ಸಲಹೆಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು ಎಂದರು.  ಏತನ್ಮಧ್ಯೆ ಎಲ್ಲಾ ವಿದ್ಯಾರ್ಥಿನಿಯರಿಗೂ ಪರೀಕ್ಷಾ ಪ್ರವೇಶ ಪತ್ರಗಳನ್ನು ವಿತರಿಸಿದರು.


ಹಿರಿಯ ಶಿಕ್ಷಕಿ ಹೆಚ್. ಪಿ.  ಮಂಜಳಾರವರು ಮಾತನಾಡಿ, ಪರೀಕ್ಷೆಯಲ್ಲಿ ಪ್ರವೇಶ ಪತ್ರದಲ್ಲಿನ ಸೂಚನೆಗಳನ್ನು ವಿದ್ಯಾರ್ಥಿಗಳು ಅನುಸರಿಸಲು ಹೇಳಿದರು. ಪ್ರತೀ ವಿಷಯದಲ್ಲಿ ಹೆಚ್ಚು ಅಂಕಗಳನ್ನು ಪಡೆಯಲು ಅಗತ್ಯ ಸಲಹೆ ನೀಡಿದರು. ಶಿಕ್ಷಕ ಕೆ.ಎನ್. ಚಿದಾನಂದ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಯಶಸ್ಸು ಸಾಧಕನ ಸ್ವತ್ತೆ ಹೊರತೂ ಸೋಮಾರಿಯ ಸ್ವತ್ತಲ್ಲ. ಸಾಧನೆಗೆ ಇಚ್ಚಾಶಕ್ತಿ ಬಹಳ ಮುಖ್ಯವಾಗಿದ್ದು, ಪರೀಕ್ಷೆ ಜ್ಞಾನವನ್ನು ಪರೀಕ್ಷಿಸಲು ಇರುವ ಒಂದು ಅವಕಾಶ. ಭಯವನ್ನು ಬದಿಗಿಟ್ಟು ಪರಿಶ್ರಮದ ಮೂಲಕ ಆತ್ಮವಿಶ್ವಾಸದಿಂದ ಮುನ್ನಡೆದರೆ ಯಶಸ್ಸು ನಮ್ಮದಾಗುತ್ತದೆ ಎಂದರು. 


ಎಸ್.ಎಸ್. ಎಲ್. ಸಿ. ವಿದ್ಯಾರ್ಥಿನಿಯರು ತಮ್ಮ ಮೂರು ವರ್ಷಗಳ ವ್ಯಾಸಂಗದ ಅವಧಿಯಲ್ಲಿ ಆದಂತಹ ಅನುಭವ ಅಭಿಪ್ರಾಯಗಳನ್ನು ಹಂಚಿಕೊಂಡರು. ಶಾಲೆಯ ಶಿಕ್ಷಕರಾದ ಎ.ವಿ. ಗೀತಾರಾಣಿ,  ರುದ್ರೇಶ್, ಎಂ.ಆರ್. ರಂಗಾಮಣಿ, ಎಸ್. ಕೆ. ಪೂರ್ಣಿಮಾ, ಪಿ. ಮಧು, ಚಿದಾನಂದ, ಕೇಶವ ಮೂರ್ತಿ, ತೈಬಾ ಕೌಸರ್ ಮತ್ತು ಶಾಲಾ ಸಿಬ್ಬಂದಿ ವರ್ಗವು ಎಲ್ಲಾ ವಿದ್ಯಾರ್ಥಿನಿಯರಿಗೂ ಶುಭಕೋರಿದರು. ಶಿಕ್ಷಕರಾದ ಸತ್ಯನಾರಾಯಣ ಮುರಳಿಯವರು ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top