ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವವರಿಗೆ ಎಂದಿಗೂ ನಮ್ಮ ಕೈಲಾದ ಸಹಾಯ ಮಾಡಬೇಕು ಎಂಬುದು ನಾವು ಗುರುಹಿರಿಯರಿಂದ ಕಲಿತ ವಿಚಾರ. ಅಂತೆಯೇ ಅಂತಹವರನ್ನು ಗುರುತಿಸಿ ಗೌರವಿಸುವುದು ಸಮಾಜದ ಜವಾಬ್ದಾರಿಯೂ ಹೌದು. ಈ ನಿಟ್ಟಿನಲ್ಲಿ ವಿವಿಧ ಪ್ರಶಸ್ತಿಗಳು ಬಿರುದುಗಳನ್ನು ಕೊಡಮಾಡುವ ಪದ್ದತಿ ನಮ್ಮಲ್ಲಿ ಹಿಂದಿನಿಂದಲೂ ಬಂದಿದೆ. ಇದೇ ಹಿನ್ನಲೆಯೊಂದಿಗೆ ವಿಶ್ವವಿದ್ಯಾಲಯಗಳಲ್ಲಿ ಗೌರವ ಡಾಕ್ಟರೇಟ್ ನೀಡುವ ಪದ್ದತಿ ಆರಂಭವಾಗಿದ್ದು ಎಂದರೆ ತಪ್ಪಾಗದು ಎಂದು ಕರ್ನಾಟಕ ರಾಜ್ಯ ಮಹಾವಿದ್ಯಾಲಯಗಳ ಶಿಕ್ಷಕರ ಸಂಘದ ಅಧ್ಯಕ್ಷ ಡಾ. ಸುರೇಂದ್ರ ಶೆಟ್ಟಿ ಹೇಳಿದ್ದಾರೆ.
ಮಾಧ್ಯಮ ಪ್ರಕಟಣೆಯಲ್ಲಿ ಅವರು, ಇತ್ತೀಚಿನ ವರ್ಷಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿ ಗೌರವ ಡಾಕ್ಟರೇಟ್ ಕೊಡುವ ರೀತಿನೀತಿಗಳನ್ನು ಗಮನಿಸಿದರೆ, ಅದು ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವವರಿಗೆ ಬಹುಶಃ ನೀಡಿಲ್ಲ ಎಂಬ ತೀಕ್ಷ್ಣವಾದ ವಿಚಾರ ಅರಿವಿಗೆ ಬರುತ್ತದೆ. ಶಿಕ್ಷಣ ಕ್ಷೇತ್ರದ ಹೊರತಾಗಿ ವಿವಿಧ ಕ್ಷೇತ್ರಗಳಲ್ಲಿ ಕೆಲಸಮಾಡುವವರಿಗೆ ಆಯಾ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಲು ವಿಫುಲ ಅವಕಾಶಗಳು ಇರುತ್ತದೆ. ವಿಶ್ವವಿದ್ಯಾಲಯವು ಅಂತಹವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸುವುದು ಹಾಗೂ ಪ್ರೇರಣೆ ನೀಡುವ ಅಗತ್ಯ ವಿರಳವೆನಿಸುತ್ತದೆ. ಅದರ ಬದಲಾಗಿ ಶಿಕ್ಷಣ ಕ್ಷೇತ್ರಕ್ಕೆ ಸಮರ್ಪಿತರಾಗಿ ನಿರಂತರ ಪರಿಶ್ರಮಿಸುತ್ತಿರುವ ಅನೇಕ ಗಣ್ಯರು ಮಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿದ್ದು, ಪ್ರತಿಫಲಾಪೇಕ್ಷೆ ಯಿಲ್ಲದೆ ಶಿಕ್ಷಣ ಕ್ಷೇತ್ರದ ಏಳಿಗೆಯ ಮೂಲಕ ಸಮಾಜದ ಏಳಿಗೆಗೆ ದುಡಿಯುತ್ತಿರುವ ಸೂಕ್ತ ವ್ಯಕ್ತಿಗಳನ್ನು ಗುರುತಿಸಿ ಗೌರವಿಸಬೇಕು. ಆಗ ಅವರಲ್ಲಿ ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಲು ಪ್ರೇರೇಪಿಸುತ್ತದೆ ಎಂದು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ