ಕಿಯೋನಿಕ್ಸ್ ಐ.ಟಿ ಪಾರ್ಕ್ ಸ್ಥಾಪನೆಗೆ ಮಹತ್ವದ ಸಭೆ; ಸ್ಥಳ ಪರಿಶೀಲನೆ

Upayuktha
0


ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ನೀಡಿದ ಮನವಿಯ ಮೇರೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬ್ಲೂ ಬೆರಿ ಹಿಲ್ಸ್ ಬಳಿ ಕಿಯೋನಿಕ್ಸ್ ಸಾಫ್ಟ್‌ವೇರ್ ಪಾರ್ಕ್ ನಿರ್ಮಾಣದ ಕುರಿತು ಮಹತ್ವದ ಸಭೆ ಹಾಗೂ ಸ್ಥಳ ಪರಿಶೀಲನೆ ನಡೆಯಿತು.


ಶಾಸಕ ಡಾ. ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಈ ಸಭೆಯ ಬಳಿಕ ಕಿಯೋನಿಸ್ಕ್ ಅಧ್ಯಕ್ಷ ಶರತ್ ಬಚ್ಚೆಗೌಡ ಹಾಗೂ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸ್ಥಳ ಪರಿಶೀಲನೆ ನಡೆಯಿತು. ಇದೇ ವೇಳೆ ರಸ್ತೆ ಅಗಲೀಕರಣದ ಬಗ್ಗೆಯೂ ಚರ್ಚೆ ನಡೆಸಲಾಯಿತು.


ಆ ಬಳಿಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ನೂತನ ಐಟಿ-ಬಿಟಿ ಪಾರ್ಕ್ ನಿರ್ಮಾಣಕ್ಕೆ ಸಂಬಂಧಪಟ್ಟ ಮಹತ್ವದ ಸಭೆಯಲ್ಲಿ ಕಿಯೋನಿಸ್ಕ್ ಅಧ್ಯಕ್ಷ ಶರತ್ ಬಚ್ಚೆಗೌಡ, ಶಾಸಕ ಡಾ. ವೈ ಭರತ್ ಶೆಟ್ಟಿ, ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ,  ಮಂಜುನಾಥ್ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರು, ಕಿಯೋನಿಸ್ಕ್ ನ ವ್ಯವಸ್ಥಾಪಕ ನಿರ್ದೇಶಕರು, ಕ್ರೆ ಡಾಯಿ ಅಸೋಸಿಯೇಷನ್ ಸದಸ್ಯರು ಹಾಗೂ ಸಂಬಂಧಪಟ್ಟ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಈ ಸಂದರ್ಭ ಮಾತನಾಡಿದ ಶಾಸಕ ಡಾ. ಭರತ್ ಶೆಟ್ಟಿ ಅವರು, ಸರಕಾರಿ ಖಾಸಗಿ ಸಹಭಾಗಿತ್ವದಲ್ಲಿ ಐಟಿ ಸೆಕ್ಟರ್ ಅನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ನಿಟ್ಟಿನಲ್ಲಿ ಸರಕಾರ ತ್ವರಿತ ಹೆಜ್ಜೆಯನ್ನು ಇಡಬೇಕಿದೆ ಎಂದು ಹೇಳಿದರು. ಮಂಗಳೂರು ಶಿಕ್ಷಣ ಕ್ಷೇತ್ರದ ಹಬ್ ಆಗಿದ್ದು ಪ್ರತಿ ವರ್ಷ ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಹೊರಗೆ ಬರುತ್ತಾರೆ. ಉನ್ನತ ತಂತ್ರಜ್ಞಾನ ಉದ್ಯೋಗಕ್ಕಾಗಿ ಬೆಂಗಳೂರು ಇಲ್ಲವೇ ಹೊರ ದೇಶವನ್ನು ಅವಲಂಬಿಸಬೇಕಾಗುತ್ತದೆ. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಸ್ಟಾರ್ಟ್ ಅಪ್ ಯೋಜನೆಗೂ ಸೂಕ್ತ ವೇದಿಕೆ ಇಲ್ಲದೆ ಪ್ರತಿಭಾ ಫಲಾಯನವಾಗುತ್ತಿದೆ. ಈ ನಿಟ್ಟಿನಲ್ಲಿ ಕಿಯೋನಿಕ್ಸ್ ಐಟಿ ಪಾರ್ಕ್ ಉತ್ತಮ ಅವಕಾಶವಾಗಬಲ್ಲದು ಎಂದು ಹೇಳಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top