ಪುಂಜಾಲಕಟ್ಟೆ: ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜ್ ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ 2024-25 ವನ್ನು ಮಾ. 25 ರಂದು ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಸೆಕ್ರೆಟ್ ಹಾರ್ಟ್ ಪದವಿ ಕಾಲೇಜು ಮಡಂತ್ಯಾರು ಪ್ರಾಂಶುಪಾಲರಾದ ಪ್ರೊ. ಅಲೆಕ್ಸ್ ಐವನ್ ಸಿಕ್ವೇರಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ಕ್ರೀಡೆ ಎಲ್ಲರ ಮನ ಬೆಳಗುವುದು ಮತ್ತು ಬದುಕಿನಲ್ಲಿ ಸ್ಪೂರ್ತಿ ನೀಡುತ್ತದೆ. ಕ್ರೀಡೆಯ ಬಗೆಗಿನ ನನ್ನ ಒಲವು ಹಲವು ವರ್ಷಗಳಿಂದ ಮುಂದುವರೆಯುತ್ತಿದೆ. ಹ್ಯಾಂಡ್ ಬಾಲ್ ಕ್ರೀಡೆಯೂ ಸಹ ಅತ್ಯಂತ ಆಕರ್ಷಣೀಯ ಕ್ರೀಡೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಾಧವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ವಿಪುಲ್ ಮುಖ್ಯ ಅತಿಥಿಗಳಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ಪ್ರತಿನಿಧಿ ಡಾ. ಪ್ರಕಾಶ್ ಡಿಸೋಜಾ ಕ್ರೀಡಾಕೂಟ ವೀಕ್ಷಕರಾಗಿ ಆಗಮಿಸಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ಶ್ರೀಮತಿ ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವಿದ್ಯಾ ಸ್ವಾಗತಿಸಿದರು. ಪ್ರೊ. ಸಂತೋಷ್ ಪ್ರಭು ವಂದನಾರ್ಪಣೆ ನೆರವೇರಿಸಿದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಶೈಲೇಶ್ ಕುಮಾರ್ ಡಿ ಹೆಚ್. ಕ್ರೀಡಾಕೂಟದ ಸಂಚಾಲಕರಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ವಿ. ಇವರು, ಕ್ರೀಡಾಕೂಟದ ಆಯೋಜನೆ ಬಹಳ ಶ್ರಮದಾಯಕ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಆಗ ಆಯೋಜಕರ ಶ್ರಮ ವ್ಯರ್ಥವಾಗದು ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ ಮಾಧವ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸರಕಾರಿ ಪ್ರಥಮ ಕಾಲೇಜು ಪುಂಜಾಲಕಟ್ಟೆ ಇಲ್ಲಿಯ ಹಿರಿಯ ವಿದ್ಯಾರ್ಥಿಗಳಾದ ಶ್ರೀಮತಿ ರಂಜಿತ, ಉಪನ್ಯಾಸಕಿ, ರಾಹುಲ್, ಉದ್ಯಮಿ ಹಾಗೂ ಸಂಘದ ಖಜಾಂಚಿ ಜಿತೇಶ್ ಕೆ. ಬೆಳ್ತಂಗಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ರೇಖಾ ಯು.ಎನ್. ಕಾರ್ಯಕ್ರಮವನ್ನು ನಿರೂಪಿಸಿದರು. ವಾಣಿಜ್ಯ ವಿಭಾಗದ ಶ್ರೀಮತಿ ಸೌಮ್ಯ ಸ್ವಾಗತಿಸಿದರು. ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಶೈಲೇಶ್ ಕುಮಾರ್ ಡಿ ಹೆಚ್. ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಿರ್ವಹಿಸಿ ವಂದನಾರ್ಪಣೆ ನೆರವೇರಿಸಿದರು.
ಸ್ಪರ್ಧೆಯಲ್ಲಿ ಎಸ್‌ಡಿಎಂ ಕಾಲೇಜು ಉಜಿರೆ ಪ್ರಥಮ, ಆಳ್ವಾಸ್ ಕಾಲೇಜ್ ಮೂಡಬಿದ್ರೆ ದ್ವಿತೀಯ, ಎಂಪಿಎಂ ಕಾಲೇಜು ಕಾರ್ಕಳ ತೃತೀಯ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ತಂಡ ಚತುರ್ಥ ಸ್ಥಾನಗಳಿಸಿದವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ