ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ, ಅಪಪ್ರಚಾರದ ವಿರುದ್ಧ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಜಾನ್ ಡೋ ಆದೇಶ

Upayuktha
0


ಬೆಂಗಳೂರು: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು OS 2145/2025 ಪ್ರಕರಣದಲ್ಲಿ ಜಾನ್ ಡೋ (ಅಶೋಕಕುಮಾರ್) ಆದೇಶ ನೀಡಿದೆ. ಈ ಆದೇಶದಂತೆ, ಯಾರೇ ಆಗಿದ್ದರೂ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿಯನ್ನು ಪ್ರಕಟಿಸಲು ಅಥವಾ ಹರಡಲು ಆಗುವುದಿಲ್ಲ.


* ಜಾನ್ ಡೋ (ಅಶೋಕಕುಮಾರ್) ಆದೇಶ ಎಂದರೇನು?

-ಜಾನ್ ಡೋ (ಅಶೋಕಕುಮಾರ್) ಆದೇಶ ಎಂದರೆ, ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧವೂ ಜಾರಿಯಾಗುವ ಕಾನೂನು ಕ್ರಮ.

-ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಮತ್ತು ಇತರ ಆನ್‌ಲೈನ್ ತಾಣಗಳಲ್ಲಿ ಅವಹೇಳನಕಾರಿ ಮತ್ತು ಅಪಪ್ರಚಾರ ಹೆಚ್ಚಿರುವ ಕಾರಣ, ಇದನ್ನು ತಡೆಯಲು ಈ ಆದೇಶ ಬಹಳ ಪ್ರಮುಖವಾಗಿದೆ.  


ಈ ಆದೇಶದ ಮಹತ್ವ- ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ  ವಿರುದ್ಧ ಯಾವುದೇ ಅವಹೇಳನಕಾರಿ ಅಪಪ್ರಚಾರವನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಹರಡುವುದು ನಿಷೇಧಿಸಲಾಗಿದೆ.  


ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದರೆ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.  

ಈ ಆದೇಶದ ಪ್ರಕಾರ, ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮ ಸಂಸ್ಥೆಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಯಾವುದೇ ಅವಹೇಳನಕಾರಿ  ವಿಚಾರ ಹಂಚಿಕೊಂಡಿದ್ದಲ್ಲಿ ತಕ್ಷಣ ಅಳಿಸಿಹಾಕುವುದು ಮತ್ತು ಮುಂದುವರಿಸಿದ್ದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಆಗುವ ಸಾಧ್ಯತೆ ಇರುತ್ತದೆ. 

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಗೌರವ ಹಾಗೂ ಪ್ರತಿಷ್ಠೆಯನ್ನು ರಕ್ಷಿಸಲು ಮತ್ತು ಅಪಪ್ರಚಾರ ತಡೆಯಲು ಮಹತ್ವದ ಆದೇಶವಾಗಿದೆ. 


ಈ ಪ್ರಕರಣವನ್ನು ಹಿರಿಯ ನ್ಯಾಯವಾದಿ ಎಸ್. ರಾಜಶೇಖರ್ ಹಿಳಿಯಾರು ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ವಾದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top