ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆಯುವ 42ನೇ ಸರಣಿ ಕೃತಿ ದುಬೈಯ ಲೇಖಕ ಬಿ.ಕೆ. ಗಣೇಶ್ ರೈ ಅವರ ಲೇಖನ ಸಂಕಲನ `ಕಡಲಾಚೆಯ ರಮ್ಯ ನೋಟ ಕೃತಿಯೂ ಮಂಗಳೂರು ಪತ್ರಿಕಾ ಭವನದಲ್ಲಿ ಮಾರ್ಚ್ 4ರಂದು ಮಂಗಳವಾರ 11 ಗಂಟೆಗೆ ಬಿಡುಗಡೆಗೊಳ್ಳಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬುದಾಬಿ ಕರ್ನಾಟಕ ಸಂಘ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ ವಹಿಸುವರು. ದುಬೈ ಬಂಟ್ಸ್ ಸಂಘದ ಅಧ್ಯಕ್ಷ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಕೃತಿ ಬಿಡುಗಡೆಗೊಳಿಸುವರು. ಲೇಖಕಿ ನಿವೃತ್ತ ಶಿಕ್ಷಕಿ ಡಾ| ಅರುಣಾ ನಾಗರಾಜ್ ಕೃತಿ ಪರಿಚಯ ಮಾಡುವರು.
ಮುಖ್ಯ ಅತಿಥಿಗಳಾಗಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ವಹಿಸುವರು. ಲೇಖಕರಾದ ಬಿ.ಕೆ. ಗಣೇಶ್ ರೈ, ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ| ಮಾಲತಿ ಶೆಟ್ಟಿ ಮಾಣೂರು ಉಪಸ್ಥಿತರಿರುವರು. ಸುರೇಖಾ ಯಳವಾರ ಕಾರ್‍ಯಕ್ರಮ ನಿರೂಪಿಸುವರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ