ಕೈವಾರ ತಾತಯ್ಯನ ತತ್ವಾದರ್ಶಗಳು ಬದುಕಿಗೆ ಮಾದರಿಯಾಗಲಿ: ಶ್ರೀನಿವಾಸ ಪೂಜಾರಿ

Upayuktha
0


ಉಡುಪಿ: ಕೈವಾರ ತಾತಯ್ಯ ಸಮಾಜವನ್ನು ತಮ್ಮ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶಗಳು ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.


ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಗಿನಾರೇಯಣರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಮಾತನಾಡುತ್ತಿದ್ದರು.


ಕೈವಾರ ತಾತಯ್ಯರು ತಮ್ಮ ಕಾಯಕದಿಂದಲೇ ಬದುಕನ್ನು ಕಟ್ಟಿಕೊಂಡು, ಭಾμÁ ಹಾಗೂ ಬರಹಗಳ ಮೂಲಕ ಸಮಾಜದ ಸಮಸ್ಯೆಗಳನ್ನು ಗುರುತಿಸಿ, ಅನ್ಯರ ಬದುಕಿನ ಏಳಿಗೆಗಾಗಿ ಶ್ರಮಿಸಿದವರು. ಆಧ್ಯಾತ್ಮ ಚಿಂತನ ಮಂಥನ ನಡೆಸುವುದರಲ್ಲಿ ಕೈವಾರ ತಾತಯ್ಯರು ಚಾಣಾಕ್ಷತೆ ಹೊಂದಿದ್ದರು ಎಂದರು.


ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಸರ್ಕಾರವು ಸಂತರ, ವಚನಕಾರರ, ಶರಣರ ಹಾಗೂ ಇಂತಹ ಸಾಧಕರ ಜಯಂತಿಯನ್ನು ಆಚರಿಸಿ ಅವರ ಬದುಕಿನ ಬಗ್ಗೆ ಜನರಿಗೆ ಜ್ಞಾನವನ್ನು ಮೂಡಿಸುವ ಮಹತ್ವ ಕೆಲಸ ಮಾಡುತ್ತಿದೆ. ಪ್ರಸ್ತುತ ಸಮಾಜದಲ್ಲಿ ನ್ಯಾಯಾಂಗ, ಶಾಸಕಾಂಗ ಎಂಬ ವ್ಯವಸ್ಥೆ ಇದ್ದರೂ ಕೂಡ ಸಮಾನತೆ ಬಂದಿಲ್ಲ. ಸಮಾಜಕ್ಕೆ ನೀಡಿದ ಕೈವಾರ ತಾತಯ್ಯರ ಕೊಡುಗೆಗಳು ಎಲ್ಲರಿಗೆ ಪ್ರೇರಣೆಯಾಗಲಿ ಎಂದರು.


ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ.ಶ್ರೀಕಾಂತ್ ಸಿದ್ದಾಪುರ ವಿಶೇಷ ಉಪನ್ಯಾಸ ನೀಡಿ, ಕೈವಾರ ತಾತಯ್ಯರು ವೃತ್ತಿ ಜೀವನವನ್ನು ತೊರೆದು ಆಧ್ಯಾತ್ಮಿಕ ಹಾದಿಯನ್ನು ಹಿಡಿದರು. ಯಾವುದೇ ಕೆಲಸದಲ್ಲಿ ಯಶಸ್ಸು ಕಾಣಬೇಕಾದರೆ ಮನಸ್ಸನ್ನು ನಿಯಂತ್ರಣದಲ್ಲಿಡಬೇಕು ಹಾಗೂ ಜೀವನದಲ್ಲಿ ಆತ್ಮಸ್ಥೈರ್ಯವನ್ನು ತಂದುಕೊಳ್ಳಬೇಕು ಎಂದರು.


ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರಸಭೆಯ ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ಆಡಳಿತ ಸಿಬ್ಬಂದಿ ವರ್ಗ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಇಲಾಖೆಯ ವರ್ಷಾ ನಿರೂಪಿಸಿ ವಂದಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top