ದಾವಣಗೆರೆ: ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಬ್ಯಾಕೂಡ ಗ್ರಾಮದ ಶ್ರೀ ಲಕ್ಕಮ್ಮದೇವಿ ಕಲಾ ಪೋಷಕರ ಸಂಘದಿಂದ ನಿನ್ನೆ ಧಾರವಾಡ ರಂಗಾಯಣ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ತೃತೀಯ ಬಯಲಾಟ ಉತ್ಸವದ ಸಮಾರಂಭದಲ್ಲಿ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, ಕಲಾಕುಂಚ, ಯಕ್ಷರಂಗ ಸಂಸ್ಥೆ, ಚಲನಚಿತ್ರ ಅಭಿಮಾನಿಗಳ ಕ್ರಿಯಾತ್ಮಕ ಸಂಸ್ಥೆ ಸಿನಿಮಾಸಿರಿ, ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ “ಕನ್ನಡ ರತ್ನ” ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಯಭಾಗದ ದಿಗ್ಗೇವಾಡಿಯ ಶ್ರೀ ದುರ್ಗಾಪರಮೇಶ್ವರಿ ಮತ್ತು ಕಾಳಿಕಾದೇವಿ ಆರಾಧಕರಾದ ಶ್ರೀ ವೇ. ಡಾ. ಶಿವಮೂರ್ತಿ ಹಿರೇಮಠ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿದ್ದರು. ಹಿರಿಯ ಜನಪದ ಕಲಾವಿದರು, ವಿದ್ವಾಂಸ ಡಾ. ಸಿ. ಕೆ. ನಾವಲಗಿ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಶ್ರೀ ಲಕ್ಕಮ್ಮದೇವಿ ಕಲಾ ಪೋಷಕರ ಸಂಘದ ಗೌರವಾಧ್ಯಕ್ಷ ಡಾ. ಸಿದ್ದಣ್ಣ ಬಾಡಗಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಧಾರವಾಡದ ಉಚ್ಚ ನ್ಯಾಯಾಲಯದ ಎಸ್.ಹೆಚ್.ಮಿಟ್ಟಿಲಕೋಡ, ರಂಗಾಯಣದ ನಿರ್ದೇಶಕ ಡಾ. ರಾಜು ತಾಳಿಕೋಟೆ, ಧಾರವಾಡದ ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ ಅಧ್ಯಕ್ಷ ಶಂಕರ ಕುಂಬಿ, ಹುಬ್ಬಳ್ಳಿಯ ವಿಶ್ವ ದರ್ಶನ ಕನ್ನಡ ದಿನಪತ್ರಿಕೆ ಸಂಪಾದಕ ಡಾ. ಎಸ್.ಎಸ್. ಪಾಟೀಲ, ರಾಯಚೂರಿನ ಸಂಜೆವಾಹಿನಿ ಕನ್ನಡ ದಿನಪತ್ರಿಕೆಯ ಸಂಪಾದಕ ಅಣ್ಣಪ್ಪ ಮೇಟಿಗೌಡ, ಬಾದಾಮಿಯ ನಾನಾ ವಿಜ್ಞಾನ ಸಮಿತಿಯ ತಾಲೂಕು ಅಧ್ಯಕ್ಷ ಜೆ.ಕೆ. ಹುಸೇನಬಾಯಿ ಮುಂತಾದ ಗಣ್ಯ ಮಾನ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಾವಣಗೆರೆಯ ಕಲಾಕುಂಚ ಸಾಂಸ್ಕøತಿಕ ಸಂಸ್ಥೆ, ಕಲಾಕುಂಚ, ಯಕ್ಷರಂಗ ಸಂಸ್ಥೆ, ಕರಾವಳಿ ಮಿತ್ರಮಂಡಳಿ, ಬಿಚ್ಕತ್ತಿ ಕುಟುಂಬ, ಕಾವೇರಿ ಸಾಂಸ್ಕೃತಿಕ ವೇದಿಕೆ, ಚಲನಚಿತ್ರ ಅಭಿಮಾನಿಗಳ ಕ್ರಿಯಾತ್ಮಕ ಸಂಸ್ಥೆ ಸಿನಿಮಾಸಿರಿ, ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ಶ್ರೀ ಗಾಯಿತ್ರಿ ಪರಿವಾರ, ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಸಗಮ ಸಂಗೀತ ಪರಿಷತ್, ಗೌಡಸಾರಸ್ವತ ಸಮಾಜ, ಜಿಲ್ಲೆ ಸಮಾಚಾರ ಪತ್ರಿಕಾ ಬಳಗ, ಸಮಾನ ಮನಸ್ಕರ ವೇದಿಕೆ, ಕಲಾಕುಂಚ ಮಹಿಳಾ ವಿಭಾಗ, ಕಾವ್ಯಕುಂಚ, ಗಾನ ಕುಂಚ, ಕುಂಚ ಕೈಪಿಡಿ ಮುಂತಾದ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ