ಕಾಸರಗೋಡು : ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಉದ್ಘಾಟನೆಯು ಮಾ.23ರಂದು ಅಪರಾಹ್ನ 2ರಿಂದ ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಘಟಕಗಳ ಪದಗ್ರಹಣ, ಪುಸ್ತಕ ಬಿಡುಗಡೆ, ಪ್ರಶಸ್ತಿ ಪ್ರದಾನ, ಚುಟುಕು ಕವಿಗೋಷ್ಠಿ, ಹಿರಿಯ ಕನ್ನಡ ಚೇತನಗಳಿಗೆ ಗೌರವಾರ್ಪಣೆ ನಡೆಯಲಿದೆ.
ಕೊಡಗು ಜಿಲ್ಲಾ ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ ಅಯ್ಯಪ್ಪ ಸಭೆಯ ಅಧ್ಯಕ್ಷತೆ ವಹಿಸುವರು. ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾಧ್ಯಕ್ಷ ವಿರಾಜ್ ಅಡೂರು ಪ್ರಾಸ್ತಾವಿಕವಾಗಿ ಮಾತನಾಡುವರು. ಕನ್ನಡ ಭವನದ ಸ್ಥಾಪಕಾಧ್ಯಕ್ಷ ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಕಾರ್ಯಕ್ರಮ ಉದ್ಘಾಟಿಸುವರು.
ಕರ್ನಾಟಕ ಜಾನಪದ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಬಿ. ಜಿ ಅನಂತಶಯನ, ಹಿರಿಯ ಸಾಹಿತಿ ಭಾರಧ್ವಜ ಕೆ ಆನಂದತೀರ್ಥ, ಕನ್ನಡ ಭವನ ಕೇಂದ್ರ ಸಮಿತಿಯ ಉಪಾಧ್ಯಕ್ಷ ಕೆ ಪಿ ರಾಜೇಶ್ಚಂದ್ರ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಎಂ ಎ ರುಬೀನಾ, ಕೊಡಗು ಕನ್ನಡ ಭವನದ ನಿರ್ದೇಶಕಿ ಹರ್ಷಿತಾ ಶೆಟ್ಟಿ ಮನವಳಿಕೆಗುತ್ತು, ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಖಜಾಂಜಿ ಚಂದನ್ ನಂದರಬೆಟ್ಟು, ಗಾಯಕಿ ರಂಜಿತಾ ಜಯರಾಂ ಭಾಗವಹಿಸುವರು.
ಈ ಸಂದರ್ಭದಲ್ಲಿ ಕಾಸರಗೋಡಿನ ಕನ್ನಡ ಭವನದ 'ಕನ್ನಡ ಪಯಸ್ವಿನಿ ಪ್ರಶಸ್ತಿ-2025'ನ್ನು ಬೊಳ್ಳಜಿರ ಬಿ ಅಯ್ಯಪ್ಪ, ರುಬೀನಾ ಎಂ ಎ, ಬಿ ಬಿ ಅನಂತಶಯನ, ಭಾರಧ್ವಜ ಕೆ ಆನಂದತೀರ್ಥ, ನಾಗೇಶ್ ಕಾಲೂರು, ಕೊಟ್ಟುಕತ್ತಿರ ಕೆ ಯಶೋದ ಪ್ರಕಾಶ್, ಯೋಗೀಶ್ ಎಚ್ ಜಿ, ತೆನ್ನೀರಾ ಟೀನಾ ಚಂಗಪ್ಪ, ಅಜ್ಜಿಕುಟ್ಟಿರ ಭವ್ಯ ಬೋಪಣ್ಣ, ಬಿ ಆರ್ ಬಸವರಾಜ್, ಚಂದನ್ ನಂದರಬೆಟ್ಟು, ಬೊಟ್ಟೋಳಂಡ ನಿವ್ಯ ದೇವಯ್ಯ ಹಾಗೂ ಕನ್ನಡ ಭವನದ 'ಭರವಸೆಯ ಬೆಳಕು ಪ್ರಶಸ್ತಿ'ಯನ್ನು ಯೋಗಪಟು ಬಿ ಕೆ ಸಿಂಚನ ಅವರಿಗೆ ಪ್ರದಾನ ಮಾಡಲಾಗುವುದು.
ಈ ಸಂದರ್ಭದಲ್ಲಿ ಅಜ್ಜಿ ಕುಟ್ಟಿರ ಭವ್ಯ ಬೋಪಣ್ಣ ಅವರ 'ದೇವ ನೇರ ಬೀರ್ಯ' ಹಾಗೂ ತೆನ್ನೀರ್ ಟೀನ್ ಚಂಗಪ್ಪ ಅವರ 'ಮನದಾಳದ ಹೆಜ್ಜೆ' ಕೃತಿಗಳು ಬಿಡುಗಡೆಯಾಗಲಿದೆ. ಕಾರ್ಯಕ್ರಮದಲ್ಲಿ ಸಾಧಕರಾದ ಪಿ ವಿ ಪ್ರದೀಪ್ ಕುಮಾರ್, ಜಯಾನಂದ ಪೆರಾಜೆ, ಡಾ. ಶಾಂತಾ ಪುತ್ತೂರು, ವಿರಾಜ್ ಅಡೂರು, ಡಾ. ಕೊಳ್ಚಪ್ಪೆ ಗೋವಿಂದ ಭಟ್, ಡಾ. ಟಿ ತ್ಯಾಗರಾಜ್, ರೇಖಾ ಎಸ್ ರಾವ್, ಡಾ. ಹೇಮಂತ್ ಕುಮಾರ ಬಿ ಅವರಿಗೆ ಕೊಡಗು ಜಿಲ್ಲಾ ಘಟಕದ ವತಿಯಿಂದ, 'ಕೊಡಗು ಜಿಲ್ಲಾ ಸಾಹಿತ್ಯ ಪ್ರಶಸ್ತಿ- 2025' ನೀಡಿ ಗೌರವಿಸಲಾಗುವುದು.
ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿಯ ಸ್ಥಾಪಕ ಸಂಚಾಲಕ ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ಟೀಚರ್ ಅವರಿಗೆ 'ಗಡಿನಾಡ ಚೇತನ ವಿಶೇಷ ಗೌರವ ಪ್ರಶಸ್ತಿ' ಪ್ರದಾನ ಮಾಡಲಾಗುವುದು. ನಂತರ ಹಿರಿಯ ಕವಿ ನಾಗೇಶ್ ಕಾನೂರು ಅವರ ಅಧ್ಯಕ್ಷತೆಯಲ್ಲಿ ಸುಮಾರು 35ಕ್ಕೂ ಮಿಕ್ಕಿದ ಚುಟುಕು ಕವಿಗಳು ಕವನ ವಾಚನ ಮಾಡಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ ಅಯ್ಯಪ್ಪ ಹಾಗೂ ಕೊಡಗು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಎಂ ಎ ರುಬೀನಾ ಜಂಟಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ