ಮಂಗಳೂರು: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ- ಮಾಧ್ಯಮ ಕಾರ್ಯಾಗಾರ

Chandrashekhara Kulamarva
0


ಮಂಗಳೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾಹಿತಿ ಶಿಕ್ಷಣ ಸಂವಹನ ವಿಭಾಗ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಆರೋಗ್ಯ ಸಂವಾದ ಕಾರ್ಯಕ್ರಮ ಸೋಮವಾರ ವಾರ್ತಾ ಇಲಾಖೆ ಸಭಾಂಗಣದಲ್ಲಿ ನಡೆಯಿತು.


ಮಂಗಳೂರು ಪ್ರೆಸ್ ಕ್ಲಬ್  ಅಧ್ಯಕ್ಷ  ಹರೀಶ್ ರೈ ಮಾತನಾಡಿ, ಯಾವುದೇ ಒಂದು ಸರಕಾರದ ಇಲಾಖೆಯ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುವಲ್ಲಿ  ಅಧಿಕಾರಿ ಸಿಬ್ಬಂದಿಗಳ ಹಾಗೂ ಮಾಧ್ಯಮಗಳ ಪಾತ್ರ ಜವಾಬ್ದಾರಿಗಳು ಮಹತ್ವದ್ದಾಗಿದೆ ಎಂದು  ಹೇಳಿದರು.


ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ  ಶ್ರೀನಿವಾಸ್ ನಾಯಕ್ ಮಾತನಾಡಿ, ಆರೋಗ್ಯ ಸಮಸ್ಯೆಯನ್ನು ಹೋಗಲಾಡಿಸುವಲ್ಲಿ ಮತ್ತು ಆರೋಗ್ಯ ಸಮಸ್ಯೆಗಳ ಬಗ್ಗೆ ಜನಜಾಗೃತಿಯನ್ನು ಮೂಡಿಸುವಲ್ಲಿ ಆರೋಗ್ಯ ಇಲಾಖೆ ಹಾಗೂ ಮಾಧ್ಯಮಗಳು ಪ್ರಬಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.


ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯಾಧಿಕಾರಿ  ಡಾ. ಹೆಚ್.ಆರ್.ತಿಮ್ಮಯ್ಯ ಉದ್ಘಾಟಿಸಿದರು. ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಭಾಗೀಯ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಉಪಸ್ಥಿತರಿದ್ದರು.


ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ  ಡಾ. ಸುದರ್ಶನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ರಾಜೇಶ್ ಬಿ.ವಿ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಖತೀಜಾ ದಿಲ್‍ಷದ್ ಇವರು ವಿವಿಧ ಆರೋಗ್ಯ ಯೋಜನೆಗಳ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೆಪಾಡಿ  ಸ್ವಾಗತಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top