ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ

Upayuktha
1 minute read
0



ಮಂಗಳೂರು: “ಗ್ರಾಹಕರು ಖರೀದಿಸುವಾಗ ಯಾವುದೇ ವಂಚನೆಗೆ ಒಳಗಾಗಬಾರದು ಹಾಗೂ ತಮ್ಮ ಹಕ್ಕುಗಳ ಬಗೆಗೆ ಸರಿಯಾಗಿ ತಿಳಿದಿರಬೇಕು. ಪ್ರತಿಯೋರ್ವ ಗ್ರಾಹಕನು ತನ್ನ ಹಕ್ಕು ಮತ್ತು ಭಾದ್ಯತೆಗಳನ್ನು ತಿಳಿದು ನಡೆಯಬೇಕೆಂದು” ಮುಖ್ಯ ಅತಿಥಿಯಾಗಿ ಆಗಮಿಸಿದ ಅಡ್ವಕೇಟ್ ಕೆ .ಪೃಥ್ವಿರಾಜ್ ರೈ ,ಮಾಜಿ ಅಧ್ಯಕ್ಷರು ,ವಕೀಲರ ಸಂಘ ಮಂಗಳೂರು ಮಾತನಾಡಿ ಹೇಳಿದರು . ಪಿ.ಎ ಪ್ರಥಮ ದರ್ಜೆ ಕಾಲೇಜು ಹಾಗೂ ವಿಶ್ವವಿದ್ಯಾನಿಲಯ  ಕಾಲೇಜು ಮಂಗಳೂರು ಒಡಂಬಡಿಕೆಯ ಅನ್ವಯ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆಯು ನಡೆಯಿತು.


ಕಾರ್ಯಕ್ರಮದ ಪೀಠಿಕೆಯ ಕುರಿತು ಡಾ.ಅಬೂಬಕ್ಕರ್ ಸಿದ್ಧಿಕ್, ಒಡಂಬಡಿಕೆಯ ಸಂಚಾಲಕರು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ವಿವರಿಸಿಕೊಟ್ಟರು. ಪಿ.ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷೀಯ ನುಡಿಗಳನ್ನಾಡಿದರು.


ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಯವಂತ ನಾಯಕ್ ಪ್ರಾಧ್ಯಾಪಕರು  ಅರ್ಥಶಾಸ್ತ್ರವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಶರಫುದ್ದೀನ್ ಪಿ.ಕೆ, ಎ .ಜಿ .ಎಮ್ ಕ್ಯಾಂಪಸ್ ಪಿ.ಎ.ಇ.ಟಿ , ಪಿ.ಎ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಹಾರಗಳ ಮುಖ್ಯಸ್ಥರಾದ ಡಾ.ಸಯ್ಯದ್ ಅಮೀನ್ ಅಹ್ಮದ್, ಪಿ.ಎ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಜಿ ಹರಿಕೃಷ್ಣನ್, ಐ.ಕ್ಯೂ.ಎ.ಸಿ ಸಂಯೋಜಕರರಾದ ವಾಣಿಶ್ರೀ ವೈ ವೇದಿಕೆಯಲ್ಲಿ ಆಸೀನರಾಗಿದ್ದರು.


ವಿದ್ಯಾರ್ಥಿಗಳಾದ ಹಿಬಾ ಮರ್ಯಂ ಕಾರ್ಯಕ್ರಮ ನಿರೂಪಿಸಿದರೆ, ಫರ್ಹಾನ್ ಸ್ವಾಗತಿಸಿ, ತಶ್ಮೀಯಾ ವಂದಿಸಿದರು. ಇರ್ಫಾದ್ ಪ್ರಾರ್ಥನೆ ನೆರವೇರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top