ಶಿಸ್ತಿನ ಬದುಕಿಗೆ ವಿ‌ದ್ಯಾರ್ಥಿ ದೆಸೆಯಲ್ಲಿ ಕ್ರೀಡೆ ಅತಿಮುಖ್ಯ: ಡಾ. ಸುಧೀರ್ ಎಂ

Upayuktha
0



ನಿಟ್ಟೆ: ಮಾನವನ ಶಿಸ್ತಿನ ಬದುಕಿಗೆ ವಿ‌ದ್ಯಾರ್ಥಿ ದೆಸೆಯಲ್ಲಿ ಕ್ರೀಡೆಯಲ್ಲಿ ತೊಡಗುವುದು ಅತಿಮುಖ್ಯ ಎಂದು ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಇನ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ಡೈರಿಕ್ಟರ್‌ ಡಾ. ಸುಧೀರ್‌ ಎಂ ಅಭಿಪ್ರಾಯಪಟ್ಟರು.


ಅವರು ನಿಟ್ಟೆ ಬಿ.ಸಿ ಅಳ್ವಾ ಕ್ರೀಡಾ ಸಂಕೀರ್ಣದಲ್ಲಿ ನಡೆದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 39ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.


ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಉಪಯೋಗಗಳು ಹಲವು. ಆರೋಗ್ಯವೇ ಭಾಗ್ಯ ಎಂದು ನಂಬಿದವರಿಗೆ ಕ್ರೀಡೆ ಮತ್ತು ನಿಯಮಿತ ವ್ಯಾಯಾಮ ಬಹಳಷ್ಟು ಅಗತ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲ ಡಾ. ರಮೇಶ ಐ ಮಿತ್ತಾಂತಾಯ ಮಾತನಾಡಿ ಕ್ರೀಡೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಇರುವುದಾದರೆ ವಿದ್ಯಾಲಯದ ವತಿಯಿಂದ ಪೂರ್ಣ ಬೆಂಬಲವಿದೆ. ನಿಟ್ಟೆ ವಿದ್ಯಾಸಂಸ್ಥೆಯು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡುತ್ತಾ ಬರುತ್ತಿರುವುದು ತುಂಬಾ ಸಂತೋಷದ ವಿಷಯ ಎಂದರು.


ಸಂಸ್ಥೆಯ ಪ್ರಾಂಶುಪಾಲ ಡಾ. ನಿರಂಜನ್‌ ಎನ್‌ ಚಿಪ್ಲೂಣ್ಕರ್‌, ಡೈರೆಕ್ಟರ್‌ ಪ್ರೋ. ಯೋಗಿಶ್‌ ಹೆಗ್ಡೆ, ಪರೀಕ್ಷಾ ಕಂಟ್ರೋಲರ್ ಡಾ. ಸುಬ್ರಮಣ್ಯ ಭಟ್‌, ವಿಭಾಗ ಮುಖ್ಯಸ್ಥರು, ಉಪನ್ಯಾಸಕ ವೃಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ದೈಹಿಕ ಶಿಕ್ಷಣ ನಿರ್ದೇಶಕ ಡಾ. ಗಣೇಶ ಪೂಜಾರಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಅತಿಥಿಯನ್ನು ಪರಿಚಯಿಸಿದರು. ಸೈಬರ್ ಸೆಕ್ಯೂರಿಟಿ ವಿಭಾಗದ ಮುಖ್ಯಸ್ಥ ಡಾ. ರೋಶನ್‌ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಸಲಹೆಗಾರ ಶ್ಯಾಮ್ ಸುಂದರ್ ವಂದಿಸಿದರು.


ಸುಮಾರು 3500 ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದ ಪಥ ಸಂಚಲನ ಹಾಗೂ ಡಾ.ಎನ್.ಎಸ್.ಎ.ಎಂ ಆಂಗ್ಲ ಮಾಧ್ಯಮ ಶಾಲಾ ಬ್ಯಾಂಡ್‌ ಸೆಟ್‌ ಪಥಸಂಚಲನದೊಂದಿಗೆ ಆಕರ್ಷಣೀಯವಾಗಿತ್ತು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top