ಮಂಗಳೂರು: ಗಾನ ನೃತ್ಯ ಅಕಾಡೆಮಿ ಆಶ್ರಯದಲ್ಲಿ ಸಂಸ್ಥೆಯ ನಿರ್ದೇಶಕಿ ವಿದ್ಯಾಶ್ರೀ ರಾಧಾಕೃಷ್ಣ ಇವರ ಶಿಷ್ಯೆಯರಿಂದ ಪ್ರೇರಣಾ ಎಂಬ ಭರತನಾಟ್ಯ ಕಾರ್ಯಕ್ರಮ ಸಂತ ಅಲೋಶಿಯಸ್ ಕಾಲೇಜಿನ ಎಲ್ ಸಿ ಅರ್ ಐ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಕಲಾಶ್ರೀ ವಿದ್ವಾನ್ ಚಂದ್ರಶೇಖರ್ ನಾವಡ ಇವರು ಭಾರತೀಯ ಪರಂಪರೆಯ ಉಳಿಸುವಲ್ಲಿ ಇಂತಹ ಕಾರ್ಯಕ್ರಮಗಳು ಪೂರಕ ಎಂದು ಅಭಿಪ್ರಾಯ ಪಟ್ಟರು.ಕಲಾವಿದರ ಪ್ರತಿಭೆಯನ್ನು ಶ್ಲಾಘಿಸಿ ಮಾತನಾಡಿದ ಅವರು ಇಂತಹ ಪ್ರತಿಭೆಗಳನ್ನು ರೂಪಿಸುವಲ್ಲಿ ಗುರುಗಳ ಹಾಗು ಹೆತ್ತವರ ಪಾತ್ರದ ಮಹತ್ವವನ್ನು ತಿಳಿಸಿದರು.
ಸಂಸ್ಥೆಯ ನಿರ್ದೇಶಕಿ ಪ್ರಾಸ್ತಾವಿಕ ಭಾಷಣ ಮೂಲಕ ಪ್ರೇರಣಾ ಕಾರ್ಯಕ್ರಮದ ಉದ್ದೇಶವನ್ನು ತಿಳಿಸುತ್ತ ಕಾರ್ಯಕ್ರಮದ ಯಶಸ್ಸಿನಲ್ಲಿ ಪ್ರೇಕ್ಷಕರ ಪಾತ್ರವನ್ನು ಉಲ್ಲೇಖಿಸಿದ್ದರು.
ಬೆಂಗಳೂರಿನ ದೂರದರ್ಶನದ ಗ್ರೇಡೆಡ್ ಕಲಾವಿದರಾಗಿ ಆಯ್ಕೆಗೊಂಡಿರುವ ತ್ವಿಷಾ ಶೆಟ್ಟಿ, ಮೈತ್ರೇಯಿ ನಾವಡ ಹಾಗೂ ದಿಶಾ ಗಿರೀಶ್ ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ಹಾಡುಗಾರಿಕೆಯಲ್ಲಿ ಗುರು ವಿದ್ಯಾಶ್ರೀ ರಾಧಾಕೃಷ್ಣ, ನಟುವಾಂಗದಲ್ಲಿ ಅನಂತಕೃಷ್ಣ, ಮೃದಂಗದಲ್ಲಿ ಬಾಲಚಂದ್ರ ಭಾಗವತ್ ಹಾಗೂ ಕೊಳಲಿನಲ್ಲಿ ನಿತೀಶ್ ಅಮ್ಮಣ್ಣಾಯ ಸಹಕರಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದಿಂದ ನಡೆದ ಈ ಕಾರ್ಯಕ್ರಮಕ್ಕೆ ಸಂಸ್ಥೆಯು ಕಾರ್ಯದರ್ಶಿ ರಾಧಾಕೃಷ್ಣ ಭಟ್ ಧನ್ಯವಾದ ಸಮರ್ಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ